Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Team Udayavani, Nov 2, 2024, 11:07 AM IST
ಬೆಂಗಳೂರು/ಹುಬ್ಬಳ್ಳಿ: ರಾಜ್ಯದೆಲ್ಲೆಡೆ ಶುಕ್ರವಾರ ನಡೆದ 69ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಹಾಗೂ ಕರ್ನಾಟಕ ಸುವರ್ಣ ಸಂಭ್ರಮದಲ್ಲಿ ಕನ್ನಡ ಭಾಷೆ, ಇತಿಹಾಸ, ಸಂಸ್ಕೃತಿ ಅನಾವರಣಗೊಂಡಿದ್ದು, ಕನ್ನಡದ ಕಲರವ ಮೇಳೈಸಿತು. ಗಡಿ ಜಿಲ್ಲೆಗಳಲ್ಲೂ ರಾಜ್ಯೋತ್ಸವ ಸಂಭ್ರಮ ಕಳೆಗಟ್ಟಿತ್ತು.
ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರಧ್ವಜ ಮತ್ತು ನಾಡ ಧ್ವಜಾರೋಹಣ ನೆರವೇರಿಸಿದರಲ್ಲದೆ, ಪೊಲೀಸ್ ಸೇರಿ ವಿವಿಧ ಪದಾತಿ ದಳಗಳಿಂದ ಗೌರವ ವಂದನೆ ಸ್ವೀಕರಿಸಿದರು. ನಾಡು-ನುಡಿಗೆ ಮಹನೀಯರ ಸೇವೆ, ತ್ಯಾಗ, ಬಲಿದಾನಗಳನ್ನು ಸ್ಮರಿಸುವ ಮೂಲಕ ಸರಕಾರದ ಕಾರ್ಯ ಯೋಜನೆಗಳನ್ನೂ ಉಲ್ಲೇಖೀಸಿ ರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗಿಯಾದರು.
ಗಡಿಜಿಲ್ಲೆ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿ ಆಚರಣೆಗೆ ಚಾಲನೆ ನೀಡಲಾಯಿತು. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಧ್ವಜಾರೋಹಣ ನೆರವೇರಿಸಿ, ಗಡಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದು ಹೇಳಿದರು.
ತುಮಕೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಾಡಧ್ವಜಾರೋಹಣ ನೆರವೇರಿಸಿ, ಕನ್ನಡ ಭಾಷೆ , ಸಂಸ್ಕೃತಿ ಉಳಿಸಿ ಬೆಳೆಸಲು ರಾಜ್ಯ ಸರ್ಕಾರ ಕಟಿಬದ್ಧವಾಗಿದೆ ಎಂದರು.
ಹಾಸನದಲ್ಲಿ ನಡೆದ ರಾಜ್ಯೋತ್ಸವ ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಗೈರಾಗಿದ್ದರು. ಹೀಗಾಗಿ, ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.
ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳೂ ಗೈರಾಗಿ ದ್ದರು. ಪಥಸಂಚಲನ ಹಾಗೂ ಒಂದೆರಡು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು ಬಿಟ್ಟರೆ, ಪ್ರಮುಖ ಶಾಲೆಗಳ ಮಕ್ಕಳು ಮತ್ತು ಕೆಲ ಶಿಕ್ಷ ಕರೂ ಗೈರಾಗಿದ್ದರು.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಉಸ್ತುವಾರಿ ಸಚಿವ ಎಚ್ .ಸಿ.ಮಹದೇವಪ್ಪ, ಮಂಡ್ಯದಲ್ಲಿ ಸಚಿವ ಚಲುವರಾಯಸ್ವಾಮಿ, ಚಾಮರಾಜನಗರದಲ್ಲಿ ಸಚಿವ ಕೆ.ವೆಂಕಟೇಶ್ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು.
ಉಡುಪಿ ಹಾಗೂ ದಕ್ಷಿಣ ಕನ್ನಡ ಉಭಯ ಜಿಲ್ಲೆಗಳಲ್ಲಿ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಟಾಳಕರ್ ಪಾಲ್ಗೊಂಡು ರಾಜ್ಯಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿ ಕೊಂಡರು.
ಹಲ್ಮಿಡಿ ಶಾಸನ ಪ್ರತಿಕೃತಿ ಅನಾವರಣ
ಕರ್ನಾಟಕದ ಮೊದಲ ಶಾಸನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಲಿ¾ಡಿ ಶಾಸನ ಪ್ರತಿಕೃತಿಯನ್ನು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಶುಕ್ರವಾರ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆನಾವರಣಗೊಳಿಸಲಾಯಿತು.
ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ ತಯಾರಿಸಲಾದ ಕಲ್ಲಿನ ಪ್ರತಿಕೃತಿ ಆಯಾ ಜಿಲ್ಲೆಗಳಿಗೆ ತಲುಪಿಸಲಾಗಿತ್ತು. ರಾಜ್ಯೋತ್ಸವ ಸಮಾರಂಭದ ಬಳಿಕ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಡಳಿತ ನಿಗದಿಪಡಿಸಿರುವ ಸ್ಥಳಗಳಲ್ಲಿ ಹಲ್ಮಿಡಿ ಶಾಸನವನ್ನು ಆನಾವರಣಗೊಳಿಸಿದರು.
ಕರ್ನಾಟಕ ಸಂಭ್ರಮ- 50 ರ ಅಂಗವಾಗಿ ರಾಜ್ಯದ ಪ್ರತಿ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಪ್ರತಿಷ್ಠಾಪಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಇನ್ನು ಮುಂದೆ ಜಿಲ್ಲಾ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಹಲ್ಮಿಡಿ ಶಾಸನ ದರ್ಶನವಾಗಲಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.