ಚಲಿಸುತ್ತಿದ್ದ ಸ್ಕೂಟಿ ಮೇಲೆ ರಸ್ತೆಪಕ್ಕದ ಬೃಹತ್ ಮರ ಬಿದ್ದು ಸವಾರ ಸ್ಧಳದಲ್ಲೇ ಮೃತ್ಯು
Team Udayavani, Nov 2, 2024, 11:56 AM IST
ಕಡಬ: ಚಲಿಸುತ್ತಿದ್ದ ಸ್ಕೂಟಿ ಮೇಲೆ ರಸ್ತೆಯ ಪಕ್ಕದಲ್ಲಿದ್ದ ಬೃಹತ್ ದೂಪದ ಮರ ಬಿದ್ದು ಸ್ಕೂಟಿ ಸವಾರ ಸ್ಧಳದಲ್ಲೇ ಮೃತಪಟ್ಟ ಘಟನೆ ಕಡಬ -ಪಂಜ ರಸ್ತೆಯ ಕೋಡಿಂಬಾಳ ಸಮೀಪ ಪುಳಿಕುಕ್ಕು ಎಂಬಲ್ಲಿ ನ.2ರ ಶನಿವಾರ ಬೆಳಗ್ಗೆ ಸಂಭವಿಸಿದೆ.
ಎಡಮಂಗಲ ಗ್ರಾಮದ ದೇವಸ್ಯ ಸುಬ್ಬಣ್ಣ ಗೌಡ ಅವರ ಪುತ್ರ, ಎಡಮಂಗಲ ಸಿ. ಎ. ಬ್ಯಾಂಕ್ ನ ಪಿಗ್ಮಿ ಸಂಗ್ರಾಹಕ ಸೀತಾರಾಮ ಗೌಡ (58) ಸ್ಧಳದಲ್ಲೇ ಸಾವನ್ನಪ್ಪಿದ ಸವಾರ.
ಮೃತ ಸೀತಾರಾಮ ಗೌಡ ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮನೆಯಲ್ಲಿ ದೀಪಾವಳಿ ಪ್ರಯುಕ್ತ ಹರಕೆ ಇದ್ದುದರಿಂದ ಕೋಳಿ ತರುವುದಕ್ಕಾಗಿ ಕಡಬಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಜನರ ಆಕ್ರೋಶ :
ರಸ್ತೆಯ ಪಕ್ಕದಲ್ಲಿನ ದೂಪದ ಮರಗಳಿಂದ ಮೇಣ (ಹಾಲು ಮಡ್ಡಿ) ಸಂಗ್ರಹಿಸಿ ಬುಡದಲ್ಲಿ ಶಿಥಿಲಗೊಂಡ ಮರಗಳನ್ನು ಹಾಗೆಯೇ ಬಿಡುತ್ತಿರುವುದರಿಂದ ಪದೇ ಪದೇ ಕಡಬ, ನೆಟ್ಟಣ ಭಾಗದಲ್ಲಿ ಮರಗಳು ರಸ್ತೆಗೆ ಮುರಿದು ಬಿದ್ದು ಅಪಾಯ ಸಂಭವಿಸುತ್ತಲೇ ಇರುವ ಬಗ್ಗೆ ಮಾಧ್ಯಮಗಳು ಹಲವು ಬಾರಿ ಎಚ್ಚರಿಸಿದ್ದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳದೇ ಇರುವುದೇ ದುರಂತಕ್ಕೆ ಕಾರಣ ಎಂದು ಸುರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ರಸ್ತೆ ತಡೆ ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.