Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
ಪಹಣಿಯಲ್ಲಿ ಆಗಿರುವ ತಿದ್ದುಪಡಿಗಳೂ ರದ್ದು : ಸರ್ಕಾರದ ಮಹತ್ವದ ತೀರ್ಮಾನ
Team Udayavani, Nov 2, 2024, 2:19 PM IST
ಬೆಂಗಳೂರು: ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.2ರ ಶನಿವಾರ ಕಂದಾಯ, ಅಲ್ಪಸಂಖ್ಯಾತರ ಕಲ್ತಾಣ ಇಲಾಖೆ ಹಾಗೂ ಮತ್ತು ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು.
ವಕ್ಫ್ ಜಮೀನು ವಿಚಾರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ನೋಟಿಸ್ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಗರಂ ಆದರು.
ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ, ವಕ್ಫ್ ವಿಚಾರವನ್ನು ಜೆಡಿಎಸ್ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ ಎಂದರು.
ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಮುಖ್ಯಮಂತ್ರಿ ವಿನಂತಿ ಮಾಡಿದರು. ಜೊತೆಗೆ ಅಪಪ್ರಚಾರಗಳಿಗೆ ಕಿವಿಗೊಡದಂತೆ ಕೋರಿದರು.
ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆಯಾಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ಸಿಎಂ ನಿರ್ದೇಶನ ನೀಡಿದರು.
ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು :
1.ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್ ಪಡೆಯಬೇಕು.
2.ರೈತರು ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.
3.ಕಾನೂನು ಬಾಹಿರವಾಗಿ ಹಾಗೂ ನೋಟಿಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್ ಮಂಡಳಿಯ ಸಿಇಒ ಜಿಲಾನಿ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಅಲ್ಫ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಮುಂತಾದವರು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.