Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
Team Udayavani, Nov 3, 2024, 12:05 PM IST
ವಿಜಯಪುರ: ಕಾನೂನು ಬಾಹಿರವಾಗಿ ರೈತರ, ಸಂಘ-ಸಂಸ್ಥೆಗಳ, ಮಠ ಮಾನ್ಯಗಳ ಜಮೀನು, ಅಲ್ಲದೇ ಸರ್ಕಾರಿ ಜಮೀನು, ಇತ್ಯಾದಿ ಆಸ್ತಿಗಳ ಉತಾರೆಯಲ್ಲಿ ವಕ್ಪ್ ಆಸ್ತಿ ಎಂದು ಎಂಟ್ರಿ ಮಾಡಿರುವುದನ್ನು ತಕ್ಷಣ ತೆಗೆದು ಹಾಕುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ನವೆಂಬರ್ 4ರ ಸೋಮವಾರದಿಂದ ಬೆಳಗ್ಗೆ 11 ಗಂಟೆಗೆ ಶ್ರೀ ಸಿದ್ದೇಶ್ವರ ಗುಡಿಯಿಂದ ಮೆರವಣಿಗೆ ಮೂಲಕ ತೆರಳಿ ನಗರದ ಜಿಲ್ಲಾಧಿಕಾರಿ ಕಚೇರಿ ಹೊರಭಾಗದಲ್ಲಿ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಆರಂಭಿಸಲಾಗುವುದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೇ ನೋಟಿಸ್ ಕೊಟ್ಟು ಅಥವಾ ಕೊಡದೆ ಉತಾರೆಗಳಲ್ಲಿ ವಕ್ಪ್ ಆಸ್ತಿ ಎಂದು ಎಂಟ್ರಿ ಮಾಡಿರುವುದನ್ನು ತೆಗೆದು ಹಾಕಬೇಕು. ಉತಾರೆಯ ಯಾವುದೇ ಕಾಲಂ ದಲ್ಲಿಯೂ ವಕ್ಪ್ ಅಂತ ಇರಬಾರದು, ಕೇವಲ ರೈತರ ಹೆಸರು ಮಾತ್ರ ಇರಬೇಕು. ಯಾವುದೇ ಆಸ್ತಿಗಳಿಗೆ ಸಂಬಂಧಿಸಿದ ತಕರಾರು ಸಾಮಾನ್ಯ ಕೋರ್ಟ್ ಗಳಲ್ಲೇ ಇತ್ಯರ್ಥ ಆಗಬೇಕು, ವಕ್ಪ್ ನ್ಯಾಯಾಲಯಕ್ಕೆ ಅವಕಾಶ ಕಲ್ಪಿಸಬಾರದು ಎಂದು ಹೇಳಿದ್ದಾರೆ.
ವಕ್ಪ್ ಅದಾಲತ್ ಮಾಡುವುದರಿಂದ ಸರ್ಕಾರಿ ನ್ಯಾಯಾಲಯಕ್ಕೆ ಮಹತ್ವ ಕಡಿಮೆ ಆಗಲಿದ್ದು, ಹೀಗಾಗಿ ಎಲ್ಲಿಯೂ ವಕ್ಪ್ ಅದಾಲತ್ ನಡೆಸಬಾರದು.
ಈಗಾಗಲೇ ವಕ್ಪ್ ಅಂತ ಎಂಟ್ರಿ ಮಾಡಿದನ್ನು ತೆಗೆದು ಹಾಕುವಂತೆ ಹಾಗೂ ನೋಟಿಸ್ ಗಳನ್ನು ಹಿಂಪಡೆಯುವುದು ಮತ್ತು ಮುಂದೆಯೂ ನೋಟಿಸ್ ಗಳನ್ನು ನೀಡದಂತೆ ಜಿಲ್ಲಾಧಿಕಾರಿಗಳು ಲಿಖಿತವಾಗಿ ಆದೇಶ ಹೊರಡಿಸಬೇಕು ಎಂದಿ ದ್ದಾರೆ.
ವಕ್ಪ್ ಕಾಯ್ದೆಯನ್ನೇ ರದ್ದುಪಡಿಸಬೇಕು ಹಾಗೂ ಇಡೀ ದೇಶದ ಎಲ್ಲ ರಾಜ್ಯಗಳಲ್ಲಿಯ ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಿ ದೇಶದ ಆಸ್ತಿಯೆಂದು ಸರ್ಕಾರದ ಸುಪರ್ದಿಗೆ ಪಡೆಯುವುದು. 1974 ರ ಮತ್ತು ತದನಂತರದ ವಕ್ಫ್ ಗೆಜೆಟ್ ನೋಟಿಫಿಕೇಶನ್ ಗಳನ್ನು ಹಿಂಪಡೆಯಬೇಕು. ಇಲ್ಲಿಯವರೆಗಿನ ವಕ್ಫ್ ಗಳಿಸಿದ ಆದಾಯಗಳನ್ನು ಸರ್ಕಾರಕ್ಕೆ ಸಲ್ಲಿಸುವದು, ಸುಖಾ ಸುಮ್ಮನೆ ರೈತರಿಗೆ ನೋಟಿಸ್ ನೀಡಿದ ಮತ್ತು ಯಾರದೋ ಆಸ್ತಿಗಳನ್ನು ವಕ್ಫ ಆಸ್ತಿ ಎಂದು ಎಂಟ್ರೀ ಮಾಡಿದ ಅಧಿಕಾರಿ ಹಾಗು ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಹೀಗೆ ಹಲವು ಬೇಡಿಕೆಗಳೊಂದಿಗೆ ಧರಣಿ ಹಮ್ಮಿಕೊಳ್ಳಲಾಗಿದೆ. ಈ ಧರಣಿಯಲ್ಲಿ ರಾಜ್ಯ ಹಾಗು ಕೇಂದ್ರದ ನಾಯಕರುಗಳು, ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಅಲ್ಲದೇ, ಪಕ್ಷಾತೀತವಾಗಿ, ರೈತರು, ನಾಗರಿಕರು, ನ್ಯಾಯವಾದಿಗಳು, ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಮಠಾಧೀಶರು, ಹಿಂದೂ ದೇಶಾಭಿಮಾನಿಗಳು, ವ್ಯಾಪಾರಸ್ಥರು, ಕಾರ್ಯಕರ್ತರು, ಮುಖಂಡರುಗಳು, ಮಹಿಳೆಯರು ಜಿಲ್ಲೆಯ ಎಲ್ಲ ಗ್ರಾಮಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅನಿರ್ದಿಷ್ಟ ಅವಧಿಯ ಈ ಧರಣಿ ಸತ್ಯಾಗ್ರಹದ ಹೋರಾಟ ಯಶಸ್ವಿಗೊಳಿಸಲು ಅವರು ವಿನಂತಿಸಿದ್ದಾರೆ.
ಇದನ್ನೂ ಓದಿ: Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.