![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Nov 3, 2024, 5:32 PM IST
ಹೊಸದಿಲ್ಲಿ: ಇಲ್ಲಿನ ಶಹದಾರಾದಲ್ಲಿ ಸಣ್ಣ ವಿವಾದದ ಜಗಳದ ನಂತರ 19 ವರ್ಷದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಅಪ್ರಾಪ್ತ ವಯಸ್ಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೈಲಾಶ್ ನಗರ ಪ್ರದೇಶದಲ್ಲಿ ಶನಿವಾರ(ನ2) ಈ ಘಟನೆ ನಡೆದಿದ್ದು “ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಗುಂಡಿನ ದಾಳಿಯ ಕುರಿತು ಪಿಸಿಆರ್ ಕರೆ ಬಂದಿದ್ದು ಕೂಡಲೇ ಸ್ಥಳಕ್ಕೆ ಪೊಲೀಸರ ತಂಡಗಳುದೌಡಾಯಿಸಿವೆ. ಹತ್ಯೆಗೀಡಾದವ ಸೂಫಿಯಾನ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಜಗ್ ಪ್ರವೇಶ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರಂಭಿಕ ತನಿಖೆಯಲ್ಲಿ, ಸೂಫಿಯಾನ್ ಮತ್ತು ಆರೋಪಿಗಳ ನಡುವೆ ಕ್ಯಾಪ್ ವಿಚಾರದಲ್ಲಿ ಜಗಳ ನಡೆದಿರುವುದು ಪೊಲೀಸರು ಕಂಡುಕೊಂಡಿದ್ದಾರೆ. ಇದರ ಮಧ್ಯೆ, ಸುಫಿಯಾನ್ ಇಬ್ಬರು ಆರೋಪಿಗಳಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ವರದಿಯಾಗಿದೆ, ಅವರು ನಂತರ ಅವರ ಕೊಲೆಗೆ ಸಂಚು ರೂಪಿಸಿದರು ಎಂದು ಅಧಿಕಾರಿ ಹೇಳಿದ್ದಾರೆ.
ದೆಹಲಿ ಮತ್ತು ಗಾಜಿಯಾಬಾದ್‌ನ ವಿವಿಧ ಸ್ಥಳಗಳಿಂದ ಪೊಲೀಸರು ಮೂವರು ಬಾಲಾಪರಾಧಿಗಳನ್ನು ವಶಕ್ಕೆ ಪಡೆದಿದ್ದಾರೆ. ಅವರ ಬಳಿ ಒಂದು ಕಂಟ್ರಿ ಮೇಡ್ ಪಿಸ್ತೂಲ್ ಮತ್ತು ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಇನ್ನೂ ಒಬ್ಬ ಶಂಕಿತ ಮತ್ತು ಪಿಸ್ತೂಲ್ ಒದಗಿಸಲು ಸಹಾಯ ಮಾಡಿದ ಆರೋಪಿಯೋಬ್ಬನ ತಾಯಿಗಾಗಿ ಹುಡುಕುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.