Kasaragod: ಉದ್ಯೋಗ ವಂಚನೆ; ಸಚಿತಾ ವಿರುದ್ಧ ಇನ್ನೊಂದು ಕೇಸು
Team Udayavani, Nov 3, 2024, 8:08 PM IST
ಮುಳ್ಳೇರಿಯ: ಉದ್ಯೋಗ ಭರವಸೆ ನೀಡಿ ಹಲವರಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಡಿವೈಎಫ್ಐ ನೇತಾರೆ, ಶೇಣಿ ಬಲ್ತಕಲ್ಲು ನಿವಾಸಿ ಸಚಿತಾ ರೈ (27) ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಬೆಳ್ಳೂರು ಕಿನ್ನಿಂಗಾರು ನಿವಾಸಿ ಲೀಲಾವತಿ ನೀಡಿದ ದೂರಿನಂತೆ ಕೇಸು ದಾಖಲಿಸಲಾಗಿದೆ.
ಲೀಲಾವತಿಯವರ ಪುತ್ರ ಚಂದ್ರಶೇಖರ್ಗೆ ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ಭರವಸೆ ನೀಡಿ 3.5 ಲಕ್ಷ ರೂ. ಪಡೆದು ವಂಚಿಸಿರುವುದಾಗಿ ದೂರು ನೀಡಲಾಗಿತ್ತು. 2022 ಜ. 9ರಿಂದ ವಿವಿಧ ಹಂತಗಳಲ್ಲಿ ಈ ಮೊತ್ತವನ್ನು ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈವರೆಗೆ ಸಚಿತಾ ರೈ ವಿರುದ್ಧ ವಿವಿಧ ಠಾಣೆಗಳಲ್ಲಾಗಿ ದಾಖಲಾಗಿರುವ ಒಟ್ಟು ಕೇಸುಗಳ ಸಂಖ್ಯೆ 16ಕ್ಕೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್ಬುಕ್ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.