By Election: ಕಣ್ಣೀರು ಹಾಕುವವರಿಗೆ ಮತ ನೀಡಬಾರದು: ಅಭ್ಯರ್ಥಿ ಸಿ.ಪಿ.ಯೋಗೇಶ್ವರ್
Team Udayavani, Nov 4, 2024, 12:56 AM IST
ರಾಮನಗರ: ಅಳುವ ಗಂಡಸನ್ನು ನಂಬಬಾರದು ಎಂಬ ಗಾದೆ ಮಾತಿದೆ. ಇದನ್ನು ಮನದಲ್ಲಿಟ್ಟುಕೊಂಡು ಕ್ಷೇತ್ರದ ಮತದಾರರು ಕಣ್ಣೀರು ಹಾಕುವವರಿಗೆ ಮತ ನೀಡದೆ, ನಿಮ್ಮ ಕಣ್ಣೀರು ಒರೆಸುವ ನನಗೆ ಮತ ನೀಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಮನವಿ ಮಾಡಿದರು.
ಚನ್ನಪಟ್ಟಣ ತಾಲೂಕಿನ ಮಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಚುನಾವಣ ಪ್ರಚಾರ ನಡೆಸಿದ ಅವರು, ಸಿಎಂ ಹುದ್ದೆಯಂತಹ ಪರಮೋಚ್ಚ ಅಧಿಕಾರವಿದ್ದಾಗಲೇ ಕ್ಷೇತ್ರದ ಅಭಿವೃದ್ಧಿ ಮಾಡಲಾಗದ ಕುಮಾರಸ್ವಾಮಿ ಅವರು ಈಗ ಮಾಡಲು ಸಾಧ್ಯವೇ? ಅಧಿಕಾರ ಇದ್ದಾಗ ಅಭಿವೃದ್ಧಿ ಬಗ್ಗೆ ಚಿಂತಿಸದ ಅವರು, ಇದೀಗ ಮಗನನ್ನು ತಂದು ನಿಲ್ಲಿಸಿದ್ದಾರೆ. ಕುಮಾರಸ್ವಾಮಿ ಸ್ವಾರ್ಥ ರಾಜಕಾರಣ ಮಾಡುತ್ತಿದ್ದು, ಅಭಿವೃದ್ಧಿಗಾಗಿ ಶ್ರಮಿಸುವ ನನಗೆ ಮತ ನೀಡಿ ಆಶೀರ್ವದಿಸಿ ಎಂದರು.
ನನಗೆ ಇರುವುದೊಂದೇ ಕ್ಷೇತ್ರ
ಕುಮಾರಸ್ವಾಮಿಗೆ ಸಾಕಷ್ಟು ಕ್ಷೇತ್ರವಿದೆ. ಅವರು ಮಂಡ್ಯ, ಹಾಸನ, ರಾಮನಗರ ಅಂತ ಎಲ್ಲ ಕಡೆ ಓಡಾಡುತ್ತಾರೆ. ಆದರೆ, ನನಗೆ ಇರುವುದು ಇದೊಂದೇ ಕ್ಷೇತ್ರ. ಚನ್ನಪಟ್ಟಣವೇ ನನ್ನ ಕರ್ಮಭೂಮಿ, ನಾನು ಇಲ್ಲೇ ಇರುತ್ತೇನೆ. ಚನ್ನಪಟ್ಟಣಕ್ಕೆ ಇದು ವಿಶೇಷವಾದ ಸಂದರ್ಭ. ಈ ಉಪಚುನಾವಣೆಯಲ್ಲಿ ನನ್ನನ್ನ ಗೆಲ್ಲಿಸಿಕೊಡಿ ಎಂದು ವಿನಂತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!
Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.