Kinnigoli: ಎಳತ್ತೂರು; ಚಿರತೆಯನ್ನು ಎದುರಿಸಿ ಸಾವು ಗೆದ್ದ ಲಿಗೋರಿ!
ಹುಲ್ಲು ಕತ್ತರಿಸುತ್ತಿದ್ದಾಗ ತನ್ನ ಮೇಲೆ ದಾಳಿ ನಡೆಸಿದ ಚಿರತೆಯನ್ನೇ ಹಿಮ್ಮೆಟ್ಟಿಸಿದರು
Team Udayavani, Nov 4, 2024, 1:00 AM IST
ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಎಳತ್ತೂರು ದೇವಸ್ಥಾನದ ದೇವರ ಗುಂಡಿ ಸಂಕದ ಬಳಿ ಚಿರತೆಯೊಂದು ಹುಲ್ಲು ಕತ್ತರಿಸುತ್ತಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕಟೀಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಳತ್ತೂರು ಕಲ್ಕರೆ ಸ್ಥಳೀಯ ನಿವಾಸಿ ಲಿಗೋರಿ ಪಿರೇರಾ ಗಾಯಗೊಂಡವರು. ಅವರು ಹೈನುಗಾರರಾಗಿದ್ದು, ದನಗಳಿಗೆ ಮೇವು ತರಲು ಹೋಗಿದ್ದಾಗ ಚಿರತೆ ದಾಳಿ ನಡೆಸಿದೆ. ಲಿಗೋರಿ ಧೈರ್ಯದಿಂದ ಚಿರತೆಯನ್ನು ಎದುರಿಸಿದ್ದು, ಕೂಡಲೇ ಅದು ಪರಾರಿಯಾಗಿದೆ.
ಲಿಗೋರಿಯವರ ಮುಖ, ಕೈ, ಕಾಲಿಗೆ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
10 ದಿನಗಳ ಹಿಂದೆ ಜಯಂತ ಅವರ ಬೈಕಿಗೆ ಕೊಲ್ಲೂರು ಪದವು ಹತ್ತಿರ ದೊಡ್ಡ ಗಾತ್ರದ ಚಿರತೆ ಅಡ್ಡ ಬಂದಿತ್ತು. ಈ ಭಾಗದಲ್ಲಿ ವಾರದ ಹಿಂದೆಯೂ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಾದ ಶಿವಪ್ರಸಾದ್ ಭಟ್ ಎಚ್ಚರಿಕೆಯಿಂದ ಇರುವಂತೆ ಮಾಹಿತಿ ನೀಡಿದ್ದರು. ಈ ಬಗ್ಗೆ ಸ್ಥಳೀಯರಾದ ಪ್ರಸಾದ್ ಎಳತ್ತೂರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.