Bengaluru: ಅತಿ ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
Team Udayavani, Nov 4, 2024, 10:45 AM IST
ಬೆಂಗಳೂರು: ಕಾರು ಡಿಕ್ಕಿ ಹೊಡೆದು ಫುಡ್ ಡೆಲಿವರಿ ಬಾಯ್ ಮೃತಪಟ್ಟಿರುವ ಘಟನೆ ಬಸವನಗುಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಾಮರಾಜಪೇಟೆ ನಿವಾಸಿ ಮಂಜುನಾಥ್(26) ಮೃತರು. ಕೃತ್ಯ ಎಸಗಿದ ಚಾಲಕ ಕಾರು ಸಮೇತ ಪರಾರಿಯಾಗಿದ್ದಾನೆ. ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ನ.2ರಂದು ರಾತ್ರಿ 10 ಗಂಟೆಗೆ ಬಸವನಗುಡಿಯ ಎಂ.ವಿ.ಸೀತಾರಾಮಯ್ಯ ರಸ್ತೆಯಲ್ಲಿ ದುರ್ಘಟನೆ ನಡೆದಿದೆ.
ಪುಡ್ಡೆಲಿವರಿ ಬಾಯ್ ಆಗಿದ್ದ ಮಂಜುನಾಥ್, ನ.2ರಂದು ರಾತ್ರಿ 10ರ ಸುಮಾರಿಗೆ ಕೆ.ಜಿ.ನಗರದಲ್ಲಿದ್ದ ಪತ್ನಿಯನ್ನು ಕರೆದುಕೊಂಡು ಬರಲು ಚಾಮರಾಜ ಪೇಟೆಯ ಮನೆಯಿಂದ ಹೋಗುತ್ತಿದ್ದರು. ಮಾರ್ಗ ಮಧ್ಯೆ ಎಂ.ವಿ.ಸೀತಾರಾಮಯ್ಯ ರಸ್ತೆಯಲ್ಲಿ ಅತಿ ವೇಗವಾಗಿ ಬಂದ ಕಾರು ಚಾಲಕ, ಮಂಜುನಾಥ್ ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮಂಜುನಾಥ್ ವಾಹನ ಸಮೇತ ಕೆಳಗೆ ಬಿದ್ದು, 2 ಕಾಲುಗಳಿಗೆ ತೀವ್ರ ಪೆಟ್ಟಾಗಿದೆ. ಕೂಡಲೇ ಸಾರ್ವಜನಿ ಕರು ಮಂಜುನಾಥ್ ಅವರ ಕೋರಿಕೆ ಮೇರೆಗೆ ಸಂಬಂಧಿ ತೇಜಸ್ವಿನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ಬಳಿಕ ಸಾರ್ವಜನಿಕರೇ ಸಮೀಪದ ಆಸ್ಪತ್ರೆಗೆ ದಾಖಲಿ ಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿ ದ್ದಾರೆ. ಘಟನೆ ಸಂಬಂಧ ಮಂಜುನಾಥ್ ಸಹೋದರ ಪುನೀತ್ ದೂರು ನೀಡಿದ್ದು, ಪರಾರಿಯಾಗಿರುವ ಕೆಎ 05 – ಎಂ.ಎನ್.1401 ಕಾರಿನ ಚಾಲಕನಾಗಿ ಶೋಧ ಕಾರ್ಯ ನಡೆಯುತ್ತಿದೆ. ಬಸವನಗುಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ
Firecracker sales: ಮಳೆಗೆ ಪಟಾಕಿ ಮಾರಾಟ ಶೇ.30 ಕುಸಿತ!
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.