Maharashtra Poll: ವಿಪಕ್ಷಗಳ ದೂರವಾಣಿ ಕದ್ದಾಲಿಕೆ-ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆ!
ದೂರವಾಣಿ ಕದ್ದಾಲಿಕೆ ಮಾಡಿರುವುದಾಗಿ ಕಾಂಗ್ರೆಸ್ ನೇತೃತ್ವದ ವಿಪಕ್ಷ ಮೈತ್ರಿ ಆರೋಪ
Team Udayavani, Nov 4, 2024, 12:49 PM IST
ಮುಂಬೈ: ವಿಪಕ್ಷಗಳ ದೂರವಾಣಿ ಕದ್ದಾಲಿಕೆ(Phone Tapping) ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರ ಪೊಲೀಸ್ ವರಿಷ್ಠಾಧಿಕಾರಿ ರಶ್ಮಿ ಶುಕ್ಲಾ ಅವರನ್ನು ಚುನಾವಣ ಆಯೋಗ(Election Commission) ಸೋಮವಾರ (ನ.04) ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ವರದಿ ಪ್ರಕಾರ, ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಆಡಳಿತಾರೂಢ ಮಹಾಯುತಿ ಮೈತ್ರಿಯ ಕುಮ್ಮಕ್ಕಿನಿಂದ ಪೊಲೀಸ್ ವರಿಷ್ಠಾಧಿಕಾರಿ ಶುಕ್ಲಾ ದೂರವಾಣಿ ಕದ್ದಾಲಿಕೆ ಮಾಡಿರುವುದಾಗಿ ಕಾಂಗ್ರೆಸ್ ನೇತೃತ್ವದ ವಿಪಕ್ಷ ಮೈತ್ರಿ ಆರೋಪಿಸಿದ್ದವು.
ಒಂದು ವೇಳೆ ರಶ್ಮಿ ಶುಕ್ಲಾ ಉನ್ನತ ಹುದ್ದೆಯಲ್ಲಿ ಮುಂದುವರಿದರೆ ಪಾರದರ್ಶಕ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಆಯೋಗಕ್ಕೆ ದೂರು ನೀಡಿತ್ತು.
ಶುಕ್ಲಾ ಅವರ ಜವಾಬ್ದಾರಿಯನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಹಿರಿಯ ಐಪಿಎಸ್ ಅಧಿಕಾರಿ, ಮುಖ್ಯ ಕಾರ್ಯದರ್ಶಿ ಸುಜಾತಾ ಸೌನಿಕ್ ಅವರಿಗೆ ಹಸ್ತಾಂತರಿಸುವಂತೆ ಚುನಾವಣ ಆಯೋಗ ನಿರ್ದೇಶನ ನೀಡಿರುವುದಾಗಿ ವರದಿ ತಿಳಿಸಿದೆ.
ಮಹಾರಾಷ್ಟ್ರದ ಮುಂದಿನ ಪೊಲೀಸ್ ವರಿಷ್ಠಾಧಿಕಾರಿ ಆಯ್ಕೆಗಾಗಿ ನವೆಂಬರ್ 5ರೊಳಗೆ ಮೂವರು ಐಪಿಎಸ್ ಅಧಿಕಾರಿಗಳ ಹೆಸರನ್ನು ಕಳುಹಿಸುವುದಾಗಿ ಆಯೋಗ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.