Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ

ಬಿಜೆಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ

Team Udayavani, Nov 4, 2024, 4:03 PM IST

Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ

ಶ್ರೀನಗರ: ನೂತನವಾಗಿ ಚುನಾಯಿತವಾದ ಜಮ್ಮು-ಕಾಶ್ಮೀರ ವಿಧಾನಸಭೆ ಕಲಾಪ ಆರು ವರ್ಷಗಳ ನಂತರ ಸೋಮವಾರ (ನ.04) ನಡೆದಿದ್ದು, ಈ ಸಂದರ್ಭದಲ್ಲಿ ಪೀಪಲ್ಸ್‌ ಡೆಮಾಕ್ರಟಿಕ್‌ ಪಕ್ಷ(PDP)ದ ಶಾಸಕ ವಾಹಿದ್ ಪರ್ರಾ, 2019ರ ಆಗಸ್ಟ್‌ ನಲ್ಲಿ ರದ್ದುಪಡಿಸಲಾದ ಆರ್ಟಿಕಲ್‌ 370 ಅನ್ನು ಮರು ಸ್ಥಾಪಿಸುವ ನಿರ್ಣಯ ಮಂಡಿಸಿದರು.

ರದ್ದುಗೊಂಡ ಕಲಂ 370 ಅನ್ನು ಮರು ಸ್ಥಾಪಿಸುವ ನಿರ್ಣಯ ಮಂಡಿಸುತ್ತಿದ್ದಂತೆಯೇ ಪಿಡಿಪಿ, ಬಿಜೆಪಿ ಶಾಸಕರ ನಡುವೆ ವಾಗ್ವಾದ ಆರಂಭಗೊಂಡು, ಕಲಾಪಕ್ಕೆ ಅಡ್ಡಿಪಡಿಸಿದ ಘಟನೆ ನಡೆಯಿತು.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರ ವಿಧಾನಸಭೆಯ ಸ್ಪೀಕರ್‌ ಆಗಿ ಏಳು ಬಾರಿ ಜಯಗಳಿಸಿದ್ದ ನ್ಯಾಷನಲ್‌ ಕಾನ್ಫರೆನ್ಸ್‌ ಶಾಸಕ ಅಬ್ದುಲ್‌ ರಹೀಮ್‌ ರಾಥರ್‌ ಅವರನ್ನು ಆಯ್ಕೆ ಮಾಡಿದ ನಂತರ, ಪುಲ್ವಾಮಾ ಶಾಸಕ ವಾಹೀದ್‌ ನಿರ್ಣಯ ಮಂಡಿಸಿದ್ದರು ಎಂದು ವರದಿ ತಿಳಿಸಿದೆ.

ಸರ್‌, ಈ ಸದನದ ಸ್ಪೀಕರ್‌ ಆಗಿ ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮ ಅನುಭವದಿಂದ ನಾವು ತುಂಬಾ ಕಲಿಯಬಹುದಾಗಿದೆ. ಇಂದು ನಾನು ಕಲಾಪದಲ್ಲಿ ನಮ್ಮ ಪಕ್ಷದ ಪರವಾಗಿ ನಿರ್ಣಯವೊಂದನ್ನು ಮಂಡಿಸುತ್ತಿದ್ದು, ರಾಜ್ಯದಲ್ಲಿ ಆರ್ಟಿಕಲ್‌ 370 ಅನ್ನು ಮರು ಜಾರಿಗೊಳಿಸಬೇಕು ಎಂದು ವಾಹೀದ್‌ ಸ್ಪೀಕರ್‌ ಆಯ್ಕೆಯ ಅಭಿನಂದನಾ ಭಾಷಣದಲ್ಲಿ ತಿಳಿಸಿದ್ದರು.

ಈ ನಿರ್ಣಯಕ್ಕೆ ಭಾರತೀಯ ಜನತಾ ಪಕ್ಷದ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿ, ನಿರ್ಣಯವನ್ನು ತಿರಸ್ಕರಿಸುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಸ್ಪೀಕರ್‌ ಅಬ್ದುಲ್‌ ರಹೀಮ್‌, ಇದು ನನ್ನ ವ್ಯಾಪ್ತಿಗೆ ಸೇರಿದ ವಿಷಯವಾಗಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ, ನಿರ್ಣಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.