Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ಕುಡಿತದ ಮತ್ತಿನಲ್ಲಿ ದುಸ್ಸಾಹಸ ತೋರಿದ ಸ್ನೇಹಿತರು...ವಿಡಿಯೋ ವೈರಲ್
Team Udayavani, Nov 4, 2024, 7:00 PM IST
ಬೆಂಗಳೂರು: ನಗರದ ಕೋಣನಕುಂಟೆ ಯಲ್ಲಿ ದೀಪಾವಳಿಯ ಸಂದರ್ಭದಲ್ಲಿ ಸ್ನೇಹಿತರು ಹೇಳಿದರೆಂದು ಪಟಾಕಿಯ ಬಾಕ್ಸ್ ಮೇಲೆ ಕುಳಿತುಕೊಂಡ ಯುಕನೊಬ್ಬ ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಮೃತ ಯುವಕ ಶಬರೀಶ್ ಎಂಬಾತನಾಗಿದ್ದಾನೆ. ಮದ್ಯದ ಅಮಲಿನಲ್ಲಿದ್ದ ಶಬರೀಶ್, ಕುಡಿದ ಮತ್ತಿನಲ್ಲಿದ್ದ ತನ್ನ ಆರು ಮಂದಿ ಸ್ನೇಹಿತರ ಸವಾಲನ್ನು ಸ್ವೀಕರಿಸಿ ಬಾಕ್ಸ್ ಮೇಲೆ ಕುಳಿತುಕೊಂಡಿದ್ದು, ಸಿಡಿದಾಗ ಗಂಭೀರವಾಗಿ ಗಾಯಗೊಂಡಿದ್ದ. ತತ್ ಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶನಿವಾರ ಮೃತಪಟ್ಟಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಕ್ಟೋಬರ್ 31 ರಂದು ಘಟನೆ ನಡೆದಿದ್ದು, ಜಮಾಯಿಸಿದ ಆರು ಜನರ ಗುಂಪು ಪಟಾಕಿ ತುಂಬಿರುವ ಬಾಕ್ಸ್ ಮೇಲೆ ಕುಳಿತರೆ ಆಟೋರಿಕ್ಷಾ ಖರೀದಿಸಿ ನೀಡುವುದಾಗಿ ಹೇಳಿದ್ದಾರೆ.
ವಿಡಿಯೋದಲ್ಲಿ ಸೆರೆಯಾದ ಈ ಘಟನೆಯು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ, ದೊಡ್ಡ ಸ್ಫೋಟದ ಬಳಿಕ ಶಬರೀಶ್ ನೆಲಕ್ಕೆ ಬೀಳುವುದನ್ನು ಕಾಣಬಹುದಾಗಿದೆ.
“ಹತ್ಯೆ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಘಟನೆಯಲ್ಲಿ ಭಾಗಿಯಾಗಿರುವ ಆರು ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ” ಎಂದು ದಕ್ಷಿಣ ಬೆಂಗಳೂರು ಉಪ ಪೊಲೀಸ್ ಆಯುಕ್ತ ಲೋಕೇಶ್ ಜಗಲಾಸರ್ ಹೇಳಿದರು.
#Whatsappfwd#Bengaluru: Prank turns Fatal for a 32-yr-old m, Shabarish. He died after a box of #firecrackers burst under his butt in Konanakunte, South Bengaluru. His friends had promised to buy him an autorickshaw if he won the challenge of sitting on a box of bursting… pic.twitter.com/1u3TGzWHUK
— Abhishek Kothari 🇮🇳 (@kothariabhishek) November 4, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.