Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Team Udayavani, Nov 5, 2024, 1:11 PM IST
ಬೆಂಗಳೂರು: ದೀಪಾವಳಿ ಹಬ್ಬ ಸಂಭ್ರಮ ಕೊನೆಗೊಂಡರೂ, ಪಟಾಕಿ ಅವಘಡಗಳಿಂದ ಕಣ್ಣಿನ ತೊಂದರೆ ಒಳಗಾದವರ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ಸೋಮವಾರ ನಗರದ 10 ಮಂದಿ ಕ ಣ್ಣಿಗೆ ತೊಂದರೆ ಆಗಿದೆ.
ನಗರದಲ್ಲಿ ಪಟಾಕಿಯಿಂದ ತೊಂದರೆಗೆ ಒಳಗಾದವರ ಸಂಖ್ಯೆ 210ಕ್ಕೆ ಏರಿಕೆಯಾಗಿದೆ. ಮಿಂಟೋ ಆಸ್ಪತ್ರೆಯಲ್ಲಿ ಅ.31ರಿಂದ ನ. 4ರವರೆಗೆ 60 ಮಂದಿಗೆ ಕಣ್ಣಿಗೆ ಸಂಬಂಧಿಸಿದಂತೆ ಚಿಕಿತ್ಸೆ ನೀಡಲಾಗಿದೆ. ಇದರಲ್ಲಿ 34 ಮಕ್ಕಳು ಕಣ್ಣಿನ ತೊಂದರೆಗೆ ಒಳಗಾಗಿದ್ದಾರೆ. 26 ಮಂದಿಗೆ ಗಂಭೀರ ಮತ್ತು 34 ಮಂದಿಗೆ ಸಣ್ಣ ಪಮಾಣದ ಗಾಯಗಳಾಗಿವೆ. 6 ಮಂದಿಗೆ ಸರ್ಜರಿ ಮಾಡಲಾಗಿದೆ. ಒಟ್ಟು 14 ಮಂದಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಒಟ್ಟು 76 ರೋಗಿಗಳು ಚಿಕಿತ್ಸೆ ಪಡೆದಿದ್ದಾರೆ. 10 ವರ್ಷದೊಳಗಿನ 14 ಮಕ್ಕಳು, 18 ವರ್ಷದೊಳಗಿನ 22 ಮಕ್ಕಳು ಪಟಾಕಿಯಿಂದ ಕಣ್ಣಿನ ತೊಂದರೆಗೆ ಒಳಗಾಗಿದ್ದಾರೆ. ಪಟಾಕಿಯಿಂದ ಕಣ್ಣಿನ ತೊಂದರೆಗೆ ಒಳಗಾದವರಲ್ಲಿ 18ವರ್ಷ ಮೇಲ್ಪಟ್ಟವರು 40 ಹಾಗೂ 18 ವರ್ಷದೊಳಗಿನ 36 ಮಕ್ಕಳು ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.