Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
ಸಂವಿಧಾನ ಅಂಗೀಕಾರದ 75ನೇ ವಾರ್ಷಿಕೋತ್ಸವ ದಿನಾಚರಣೆ
Team Udayavani, Nov 5, 2024, 5:53 PM IST
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಆರಂಭಗೊಳ್ಳಲಿದ್ದು, ಡಿಸೆಂಬರ್ 25ರವರೆಗೆ ಕಲಾಪ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಂಗಳವಾರ (ನ.05) ಘೋಷಿಸಿದ್ದಾರೆ.
2024ರ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿರುವ ಸಂಸತ್ ಚಳಿಗಾಲದ ಉಭಯ ಅಧಿವೇಶನದ ಪ್ರಸ್ತಾಪಕ್ಕೆ ರಾಷ್ಟ್ರಪತಿ ಮುರ್ಮು ಅವರು ಅಂಗೀಕಾರ ನೀಡಿರುವುದಾಗಿ ರಿಜಿಜು ಎಕ್ಸ್ ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
ಚಳಿಗಾಲದ ಕಲಾಪದಲ್ಲಿ ನವೆಂಬರ್ 26ರಂದು ಸಂವಿಧಾನ ಅಂಗೀಕಾರದ 75ನೇ ವಾರ್ಷಿಕೋತ್ಸವ ದಿನಾಚರಣೆಯ ಕಾರ್ಯಕ್ರಮವನ್ನು ಸಂವಿಧಾನ ಸದನದ ಸೆಂಟ್ರಲ್ ಹಾಲ್ ನಲ್ಲಿ ನಡೆಸಲಾಗುವುದು ಎಂದು ಸಚಿವ ರಿಜಿಜು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ನವೆಂಬರ್ ನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದ್ದು, ಪ್ರಸ್ತುತ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿ (JPC) ಪರಿಶೀಲನೆ ನಡೆಸುತ್ತಿದೆ. ಅಲ್ಲದೇ ಈ ಅಧಿವೇಶನದಲ್ಲೇ “ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.