Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  


Team Udayavani, Nov 5, 2024, 7:53 PM IST

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಆಯುಷ್ಮಾನ್‌ ಭಾರತ್‌ ಯೋಜನೆಯಡಿಯಲ್ಲಿ ಸೇರಿಸಬೇಕು ಎಂದು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.

ತುರ್ತು ಸಂದರ್ಭದಲ್ಲಿ ರೋಗಿ ಮತ್ತು ಕುಟುಂಬದವರಿಗೆ ಆಯುಷ್ಮಾನ್‌ ಭಾರತ್‌ದಡಿ ನೋಂದಣಿಯಾದ ಆಸ್ಪತ್ರೆಗಳನ್ನು ಹುಡುಕುವುದು ಕಷ್ಟ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಆಯುಷ್ಮಾನ್‌ ಭಾರತ್‌ ಸವಲತ್ತುಗಳು ಹಾಗೂ ಆಸ್ಪತ್ರೆಗಳ ಮಾಹಿತಿಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂತಾಗಲು ಪ್ರತ್ಯೇಕ ಆ್ಯಪ್‌ ಸಿದ್ದಗೊಳಿಸಬೇಕು ಎಂದು ಸೂಚಿಸಿದರು.

ನೋಡಲ್‌ ಅಧಿಕಾರಿ ನೇಮಿಸಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಆಸ್ಪತ್ರೆಗಳಿದ್ದು, ಆರೋಗ್ಯ ವ್ಯವಸ್ಥೆ ಉತ್ತಮವಾಗಿದೆ. ಆದರೆ ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆಗಳು ಪಡೆಯುವಲ್ಲಿ ಗೊಂದಲಗಳು ಉಂಟಾಗುತ್ತಿರುವುದು ವಿಷಾದಕರ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಆಯುಷ್ಮಾನ್‌ ಅಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬಿಸುವುದು, ರೋಗಿಗಳನ್ನು ಅಲೆದಾಡಿಸುವುದು, ಸರಕಾರಿ ಆಸ್ಪತ್ರೆಯ ಶಿಫಾರಸು ಪತ್ರ ನೀಡಲು ವಿಳಂಬಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಎಲ್ಲಾ ಆಸ್ಪತ್ರೆಗಳಲ್ಲಿ ಆಯುಷ್ಮಾನ್‌ ಭಾರತ್‌ ಸೌಲಭ್ಯಗಳ ಕುರಿತು ಆರೋಗ್ಯ ಇಲಾಖೆ, ಆಸ್ಪತ್ರೆ ಮತ್ತು ರೋಗಿಗಳ ನಡುವೆ ಸಮನ್ವಯ ಸಾ ಧಿಸಲು ನೋಡಲ್‌ ಅ ಕಾರಿಯನ್ನು ನೇಮಿಸಬೇಕು. ಆಸ್ಪತ್ರೆಗಳಲ್ಲಿ 24 ಗಂಟೆಯೂ ಆಯುಷ್ಮಾನ್‌ ಸೇವೆ ಲಭ್ಯವಿರಬೇಕು ಎಂದು ಸಂಸದರು ಹೇಳಿದರು.

ಎಪಿಎಲ್‌; ಆಯುಷ್ಮಾನ್‌ ನಿರಾಕರಿಸುವಂತಿಲ್ಲ ಯಾವುದೇ ಆಸ್ಪತ್ರೆಗಳು ಎಪಿಎಲ್‌ ಕುಟುಂಬಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಸಭೆಯಲ್ಲಿ ಜಿಲ್ಲಾಕಾರಿ ಮುಲ್ಲೈ ಮುಗಿಲನ್‌ ಎಂ.ಪಿ ತಿಳಿಸಿದರು.

ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಬಿಪಿಎಲ್‌ ಕುಟುಂಬದ ಸದಸ್ಯರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ದೊರೆಯಲಿದೆ. ಎಪಿಎಲ್‌ ಕುಟುಂಬದವರಿಗೆ ಒಟ್ಟಾರೆ ಚಿಕಿತ್ಸೆ ವೆಚ್ಚದಲ್ಲಿ ಶೇ.30 ರಿಯಾಯಿತಿ ಪಡೆಯಲು ಅವಕಾಶ ಇದೆ. ಆದರೆ ಕೆಲವು ಆಸ್ಪತ್ರೆಗಳಲ್ಲಿ ಎಪಿಎಲ್‌ ಕುಟುಂಬದವರಿಗೆ ಆಯುಷ್ಮಾನ್‌ ಭಾರತ್‌ ಸವಲತ್ತು ನೀಡಲು ನಿರಾಕರಿಸುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ಬಗ್ಗೆ ಕ್ರಮ ಜರುಗಿಸಬೇಕಾಗಬಹುದು ಎಂದು ಅವರು ಎಚ್ಚರಿಕೆ ನೀಡಿದರು.

15.08 ಲಕ್ಷ ರೂ. ಬಿಡುಗಡೆ
ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್‌.ಆರ್‌. ತಿಮ್ಮಯ್ಯ ಮಾತನಾಡಿ, ಕಳೆದ ಆಗಸ್ಟ್‌ ತಿಂಗಳೊಂದರಲ್ಲಿ ಜಿಲ್ಲೆಯಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ನೀಡಿದ ಮೊತ್ತ 15.08 ಲಕ್ಷ ರೂ. ವನ್ನು ವಿವಿಧ ಆಸ್ಪತ್ರೆಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ವೆನ್ಲಾಕ್‌ ಆಸ್ಪತ್ರೆ ಅಧೀಕ್ಷಕ ಡಾ| ಶಿವಕುಮಾರ್‌ ಮಾತನಾಡಿ, ಸರಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಚಿಕಿತ್ಸೆಗಳಿಗೆ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ನೀಡಲು ಅವಕಾಶ ಇಲ್ಲ. ಸಣ್ಣ ಕಾಯಿಲೆಗಳಿಗೂ ಖಾಸಗಿ ಆಸ್ಪತ್ರೆಗಳಲ್ಲಿ ಶಿಫಾರಸ್ಸು ನೀಡಲು ಒತ್ತಡ ಬರುತ್ತಿದ್ದು ಇದಕ್ಕೆ ನಿಯಮದಲ್ಲಿ ಅವಕಾಶವಿಲ್ಲವೆಂದು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ಹರೀಶ್‌ ಪೂಂಜಾ, ಉಮಾನಾಥ ಕೋಟ್ಯಾನ್‌ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆ ಪ್ರತಿನಿ ಧಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.