Puttur: ರಸ್ತೆ ಅಪಘಾತದಲ್ಲಿ ಸಾವು; ಆರೋಪಿ ಚಾಲಕ ಖುಲಾಸೆ
Team Udayavani, Nov 5, 2024, 10:01 PM IST
ಪುತ್ತೂರು: ಏಳು ವರ್ಷಗಳ ಹಿಂದೆ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ವಾಹನವೊಂದರ ಚಾಲಕ ಮೃತಪಟ್ಟ ಘಟನೆಗೆ ಸಂಬಂಧಿಸಿ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಲಾರಿ ಚಾಲಕನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
2017ರ ಸೆ. 9ರಂದು ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ಲಾರಿ (ಟಿಎನ್ 18:ಎಎಚ್ 8852) ನೀರಕಟ್ಟೆಯಲ್ಲಿ ಬೇರೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ನೋಂದಣಿಯಾಗದ ಮಿನಿ ಟೆಂಪೋ ದೋಸ್ತ್ ಗೆ ಢಿಕ್ಕಿ ಹೊಡೆದಿತ್ತು. ದೋಸ್ತ್ ಚಾಲಕ ನವಾಝ್ (32) ಮೃತಪಟ್ಟಿದ್ದರು.
ಇಸ್ಮಾಯಿಲ್ ಕೋಲ್ಪೆ ನೀಡಿದ್ದ ದೂರಿನ ಮೇರೆಗೆ ಲಾರಿ ಚಾಲಕ ಹುಬ್ಬಳ್ಳಿಯ ಶಿವಪ್ಪ ಸುರೇಶ ಅವರ ವಿರುದ್ಧ ಪುತ್ತೂರು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ಲಾರಿ ಚಾಲಕನನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.