Kundapura: ಅಪ್ರಾಪ್ತ ವಯಸ್ಕಳ ಜತೆ ಸಂಪರ್ಕ; ಮದುವೆಯಾಗುವುದಾಗಿ ಮೋಸ; 20 ವರ್ಷ ಶಿಕ್ಷೆ
Team Udayavani, Nov 6, 2024, 7:30 AM IST
ಕುಂದಾಪುರ: ಸ್ಥಳೀಯ ಠಾಣೆ ವ್ಯಾಪ್ತಿಯ ಅಪ್ರಾಪ್ತ ವಯಸ್ಕಳನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿ ವಂಚಿಸಿದ ಆರೋಪಿಗೆ ನ್ಯಾಯಾಲಯ 20 ವರ್ಷ ಕಠಿನ ಸಜೆ ನೀಡಿದೆ.
17ರ ಹರೆಯದ ನೊಂದ ಬಾಲಕಿಯನ್ನು ಕಾಲೇಜಿಗೆ ಹೋಗುವಾಗ ಸಂಪರ್ಕಿಸಿದ ಮಿಥುನ್ (21) ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದೊಯ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ನಡೆಸಿದ್ದ. ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಕರೆದೊಯ್ದಾಗ ಗರ್ಭಿಣಿ ಎಂದು ಗೊತ್ತಾಗಿತ್ತು. ಆಕೆಯ ತಂದೆ ನೀಡಿದ್ದ ದೂರಿನ ಮೇಲೆ ಕುಂದಾಪುರ ಇನ್‌ಸ್ಪೆಕ್ಟರ್ ನಂದಕುಮಾರ್ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಅಭಿಯೋಜನೆ ಪರ ಸಲ್ಲಿಸಿದ 30 ಸಾಕ್ಷಿಗಳ ಪೈಕಿ 16 ಸಾಕ್ಷಿಗಳನ್ನು ವಿಚಾರಿಸಿ, ವಾದ ಆಲಿಸಿ, ಡಿಎನ್‌ಎ ಸಾಕ್ಷéವನ್ನು ಪರಿಗಣಿಸಿ ಆರೋಪಿ ದೋಷಿ ಎಂದು ತೀರ್ಪು ನೀಡಿದ್ದಾರೆ. ಅಪರಾಧಿಗೆ 20 ವರ್ಷಗಳ ಸಜೆ, 21 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡದ ಮೊತ್ತದಲ್ಲಿ 15 ಸಾವಿರ ರೂ. ಬಾಲಕಿಗೆ, 6 ಸಾವಿರ ರೂ. ಸರಕಾರಕ್ಕೆ ಸಲ್ಲಿಸುವಂತೆಯೂ ನೊಂದ ಬಾಲಕಿಗೆ ಸರಕಾರದಿಂದ 2 ಲಕ್ಷ ರೂ. ನೀಡುವಂತೆಯೂ ಆದೇಶಿಸಿದ್ದಾರೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.