Kasaragod: ಎಡನೀರು ಶ್ರೀಗಳ ವಾಹನದ ಮೇಲೆ ದಾಳಿ: ಪ್ರತಿಭಟನೆ
Team Udayavani, Nov 5, 2024, 11:34 PM IST
ಕಾಸರಗೋಡು: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರ ವಾಹನದ ಮೇಲಿನ ದುಷ್ಕರ್ಮಿಗಳ ದಾಳಿಯನ್ನು ವಿರೋಧಿಸಿ ಮಂಗಳವಾರ ಸಂಜೆ ಬೋವಿಕ್ಕಾನ ಪೇಟೆಯಲ್ಲಿ ಹಿಂದೂ ಸಂಘಟನೆಗಳು, ದೇವಾಲಯದ ಭಕ್ತರು ಮತ್ತು ಸಮುದಾಯ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಈ ಸಂಬಂಧ ಆಯೋಜಿಸಿದ ಬೃಹತ್ ಸಭೆಯಲ್ಲಿ ಹಿಂದೂ ಐಕ್ಯವೇದಿ ಜಿಲ್ಲಾ ಅಧ್ಯಕ್ಷ ಎಸ್.ಪಿ. ಶಾಜಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಅಧ್ಯಕ್ಷ ಜಯದೇವ ಖಂಡಿಗೆ, ಆರ್‌ಎಸ್‌ಎಸ್ ಕಾಸರಗೋಡು ಸಂಘ ಚಾಲಕ್ ಪ್ರಭಾಕರ್, ಸಂಕಪ್ಪ ಭಂಡಾರಿ, ಗಣೇಶ್ ಮಾವಿನಕಟ್ಟೆ, ಧಾರ್ಮಿಕ ಮುಂದಾಳು ಅರುಣ್ ಕುಮಾರ್ ಪುತ್ತಿಲ, ಡಾ|ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ವಿಠಲ ಭಟ್, ವಿಘ್ನೇಶ್ವರ ಭಟ್, ಸುರೇಶ್ ಕೀಯೂರು, ವಾಮನ ಆಚಾರ್ಯ, ನವೀನ್ ಕುಮಾರ್, ಸೀತಾರಾಮ ಬಳ್ಳುಳ್ಳಾಯ ಮೊದಲಾದವರು ಉಪಸ್ಥಿತರಿದ್ದರು.
ರಾಜನ್ ಮುಳಿಯಾರು ಸ್ವಾಗತಿಸಿದರು. ಸಭಾ ಕಾರ್ಯಕ್ರಮಕ್ಕೆ ಮುನ್ನ ಬೋವಿಕ್ಕಾನ ಪೇಟೆಯಲ್ಲಿ ಬೃಹತ್ ಪ್ರತಿಭಟನ ಮೆರವಣಿಗೆ ನಡೆಯಿತು. ಸಭೆಯಲ್ಲಿ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದರು.
ಪುತ್ತಿಗೆ ಮಠಾಧೀಶರ ಖೇದ
ಉಡುಪಿ: ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರ ಕಾರಿನ ಮೇಲೆ ದುಷ್ಕ ರ್ಮಿ ಗಳು ದಾಳಿ ನಡೆಸಿರುವುದನ್ನು ಉಗ್ರ ವಾಗಿ ಖಂಡಿಸುತ್ತೇವೆ ಹಾಗೂಹಲ್ಲೆಯು ಖೇದ ಉಂಟು ಮಾಡಿದೆ.
ಮುಂದೆ ಇಂತಹ ಘಟನೆ ನಡೆಯ ದಂತೆ ಸರಕಾರಿ ಆಡಳಿತ ವ್ಯವಸ್ಥೆ ನೋಡಿಕೊಳ್ಳಬೇಕಿದೆ. ಅಲ್ಲದೆ ದಾಳಿ ನಡೆಸಿದವರಿಗೆ ಕಠಿನ ಶಿಕ್ಷೆ ವಿಧಿಸಬೇಕು. ಸರಕಾರಗಳು ಈ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸ ಬೇಕು ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಒತ್ತಾಯಿಸಿದ್ದಾರೆ.
ವಿಶ್ವ ಹಿಂದೂ ಪರಿಷತ್ ಖಂಡನೆ
ಮಂಗಳೂರು: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ಸಂಚರಿಸುತ್ತಿದ್ದ ವಾಹನಕ್ಕೆ ಕಿಡಿಗೇಡಿಗಳು ತಡೆ ಯೊಡ್ಡಿದ ಘಟನೆಯನ್ನು ವಿಶ್ವ ಹಿಂದೂ ಪರಿಷತ್ ಖಂಡಿಸಿದೆ.
ಸಾಧು ಸಂತರನ್ನು ಗುರಿಯಾಗಿಸಿ ಕೊಂಡು ನಡೆಯುತ್ತಿರುವ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪವೆಲ್ ಅವರು ಕೇರಳ ಸರಕಾರವನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.