Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Team Udayavani, Nov 6, 2024, 11:17 AM IST
ಬೆಂಗಳೂರು: ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಸಾರ್ವಜನಿಕವಾಗಿ ಕೊಲೆಗೈದು, ಬಳಿಕ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಭೀಕರ ಘಟನೆ ಜೀವನ್ ಭೀಮಾನಗರ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಚೆಲ್ಲಘಟ್ಟ ನಿವಾಸಿ ಸಂಗೀತಾ(30) ಕೊಲೆಯಾದ ಮಹಿಳೆ. ನಾಗರಾಜ್ ಆತ್ಮಹತ್ಯೆಗೆ ಯತ್ನಿಸಿದವ.
ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಸಂಗೀತಾ, 6 ವರ್ಷಗಳ ಹಿಂದೆ ನಾಗರಾಜ್ ನನ್ನು ಮದುವೆಯಾಗಿದ್ದರು. ದಂಪತಿಗೆ ನಾಲ್ಕು ವರ್ಷದ ಮಗು ಕೂಡ ಇದೆ. ದಂಪತಿ ಮಂಗಳವಾರ ರಾತ್ರಿ ಕುಳ್ಳಪ್ಪ ಗಾರ್ಡನ್ನಲ್ಲಿರುವ ಸಂಬಂಧಿ ಮನೆಗೆ ಬಂದಿದ್ದು, ಈ ವೇಳೆ ಮದ್ಯದ ಅಮಲಿನಲ್ಲಿ ಆರೋಪಿ ನಾಗರಾಜ್, ಪತ್ನಿ ಜತೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ಕೋಪಗೊಂಡ ಪತಿ ತನ್ನ ಪತ್ನಿಯನ್ನು ಕೆಳಗೆ ತಳ್ಳಿ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಬಳಿಕ ಆತನೂ ತನ್ನ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಆತನು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಜೀವನ್ ಭೀಮಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.