Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Team Udayavani, Nov 6, 2024, 11:21 AM IST
ಹುಣಸೂರು: ಮನೆಯಿಂದ ಹೊರಹೋಗಿದ್ದ ಗೃಹಿಣಿ ನಾಪತ್ತೆಯಾಗಿರುವ ಘಟನೆ ತಾಲೂಕಿನ ಬಿಳಿಕೆರೆ ಹೋಬಳಿಯ ತೆಂಕಲಕೊಪ್ಪಲಿನಲ್ಲಿ ನ.5ರ ಮಂಗಳವಾರ ನಡೆದಿದೆ.
ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ತೆಂಕಲಕೊಪ್ಪಲಿನ ಟಿ.ಎಂ.ಪ್ರಭಾಕರ್ರ ಪತ್ನಿ ಅಂಬಿಕಾ (39) ಅವರು ಅಕ್ಟೋಬರ್ 29 ರಂದು ಮನೆಯಿಂದ ಹೊರಗೆ ಹೋಗಿದ್ದವರು ನಾಪತ್ತೆಯಾಗಿದ್ದಾರೆ ಎಂದು ಪತಿ ಪ್ರಭಾಕರ್ ಬಿಳಿಕೆರೆ ಠಾಣೆಯಲ್ಲಿ ದೂರು ನೀಡಿದರನ್ವಯ ಪ್ರಕರಣ ದಾಖಲಾಗಿದೆ.
ಅಂಬಿಕಾ ಕನ್ನಡ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಗುಲಾಬಿ ಬಣ್ಣದ ಸೀರೆ ಮತ್ತು ರವಿಕೆ ಧರಿಸಿದ್ದು, 4.5 ಅಡಿ ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಬಣ್ಣ ಹೊಂದಿದ್ದಾರೆ.
ಈಕೆಯ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಮೊ.ಸಂ: 9480805057ಗೆ ಮಾಹಿತಿ ನೀಡುವಂತೆ ಇನ್ಸ್ ಪೆಕ್ಟರ್ ಲೋಲಾಕ್ಷಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.