US Result: ಜಾರ್ಜಿಯಾ, ಉ.ಕೆರೋಲಿನಾದಲ್ಲಿ ಟ್ರಂಪ್ ಕಮಾಲ್, ಹ್ಯಾರಿಸ್ ಗೆ ತೀವ್ರ ಹಿನ್ನಡೆ
ಜೋ ಬೈಡೆನ್ ಕೇವಲ 11,779 ಮತಗಳ ಅಂತರದಲ್ಲಿ ಜಯ ಸಾಧಿಸಲು ಕಾರಣವಾಗಿದ್ದ ಜಾರ್ಜಿಯಾ
Team Udayavani, Nov 6, 2024, 12:15 PM IST
ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆಯಾಗುತ್ತಾರಾ ಅಥವಾ ಕಮಲಾ ಹ್ಯಾರಿಸ್ ಶ್ವೇತಭವನ ಪ್ರವೇಶಿಸುತ್ತಾರಾ ಎಂಬ ಕುತೂಹಲ ಇಡೀ ಜಗತ್ತಿನದ್ದಾಗಿದೆ. ಏತನ್ಮಧ್ಯೆ ಅಧ್ಯಕ್ಷಗಾದಿಗೆ ಏರಲು ನಿರ್ಣಾಯಕವಾಗಿರುವ ಏಳು ರಾಜ್ಯಗಳ ಫಲಿತಾಂಶದಲ್ಲಿ ಟ್ರಂಪ್ ಉತ್ತರ ಕೆರೋಲಿನಾ ಮತ್ತು ಜಾರ್ಜಿಯಾದಲ್ಲಿ ಗೆಲುವು ಸಾಧಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಜಾರ್ಜಿಯಾದ 16 ಎಲೆಕ್ಟ್ರೊರಲ್ ಕಾಲೇಜ್ ಮತಗಳು ಟ್ರಂಪ್ ಪಾಲಾಗಿರುವುದಾಗಿ ಸಿಎನ್ ಎನ್ ವರದಿ ಮಾಡಿದೆ. ಅಧ್ಯಕ್ಷೀಯ ಚುನಾವಣ ರಾಜಕೀಯದಲ್ಲಿ ಜಾರ್ಜಿಯಾ ನೂತನ ಯುದ್ಧ ಭೂಮಿಯಾಗಿ ಮಾರ್ಪಟ್ಟಿದೆ.
ಅದಕ್ಕೆ ಕಾರಣ 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡೆನ್ ಶ್ವೇತಭವನ ಪ್ರವೇಶಿಸಲು ಜಾರ್ಜಿಯಾ ಮತ ನಿರ್ಣಾಯಕ ಪಾತ್ರ ವಹಿಸಿತ್ತು. ಕಳೆದ ಅಧ್ಯಕ್ಷ ಚುನಾವಣೆಯಲ್ಲಿ ಜೋ ಬೈಡೆನ್ ಕೇವಲ 11,779 ಮತಗಳ ಅಂತರದಲ್ಲಿ ಜಯ ಸಾಧಿಸಲು ಕಾರಣವಾಗಿದ್ದ ಜಾರ್ಜಿಯಾ ಸುಮಾರು 30 ವರ್ಷಗಳ ನಂತರ ಮೊದಲ ಬಾರಿಗೆ ರಿಪಬ್ಲಿಕನ್ ಅಭ್ಯರ್ಥಿ ಟ್ರಂಪ್ ಪರ ಮತ ಚಲಾಯಿಸಿರುವುದು ಗಮನಾರ್ಹವಾಗಿದೆ.
ಜಾರ್ಜಿಯಾದಲ್ಲಿ ಕಮಲಾ ಹ್ಯಾರಿಸ್ ಗೆ ತೀವ್ರ ಹಿನ್ನಡೆಯಾದಂತಾಗಿದೆ. ಪ್ರಸ್ತುತ ಫಲಿತಾಂಶದ ಟ್ರೆಂಡ್ಸ್ ಪ್ರಕಾರ ಡೊನಾಲ್ಡ್ ಟ್ರಂಪ್ 247 ಮತಗಳು ಕಮಲಾ ಹ್ಯಾರಿಸ್ 210 ಮತಗಳನ್ನು ಪಡೆದಿರುವುದಾಗಿ ವರದಿ ವಿವರಿಸಿದೆ. ಈ ಹಿನ್ನೆಲೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಇನ್ನುಳಿದ ಎಲ್ಲಾ ಸ್ಥಾನಗಳಲ್ಲಿ ಗೆಲುವು ಸಾಧಿಸಿದಲ್ಲಿ ಮಾತ್ರ ಅಧ್ಯಕ್ಷಗಾದಿಗೆ ಅಗತ್ಯವಿರುವ ಮ್ಯಾಜಿಕ್ ಸಂಖ್ಯೆ 270 ಮತಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದು ವರದಿ ವಿಶ್ಲೇಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.