BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ
ವಯನಾಡ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕಿ ಭರ್ಜರಿ ಪ್ರಚಾರ...
Team Udayavani, Nov 6, 2024, 1:06 PM IST
ವಯನಾಡ್: ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಮಾನತೆ, ನ್ಯಾಯ ಮತ್ತು ಜಾತ್ಯತೀತತೆಯ ಸಾಂವಿಧಾನಿಕ ಮೌಲ್ಯಗಳನ್ನು ನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವಯನಾಡ್ ಲೋಕಸಭಾ ಉಪಚುನಾವಣೆಯ ಯುಡಿಎಫ್ ಅಭ್ಯರ್ಥಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ(ನ6 ) ಆರೋಪಿಸಿದ್ದಾರೆ.
ಮಲಪ್ಪುರಂ ಜಿಲ್ಲೆಯ ವಂಡೂರು ವಿಧಾನಸಭಾ ಕ್ಷೇತ್ರದ ಚೆರುಕೋಡ್‌ನಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಬಿಜೆಪಿ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ ಪ್ರಿಯಾಂಕಾ, ಕಳೆದ 10 ವರ್ಷಗಳಲ್ಲಿ ಬಿಜೆಪಿಯು ದೇಶದಲ್ಲಿ ವಿಭಜನೆಯ ರಾಜಕೀಯವನ್ನು ಮಾಡಿದೆ, ಅದು ಅಧಿಕಾರದಲ್ಲಿ ಉಳಿಯಲು ಜನರು ಎದುರಿಸುತ್ತಿರುವ ನೈಜ ಸಮಸ್ಯೆಗಳಿಂದ ದೂರವಿಡಲು ಪ್ರಯತ್ನಿಸಿದೆ ಎಂದಿದ್ದಾರೆ.
ದೇಶದಲ್ಲಿ ಬಿಜೆಪಿಯ ಧೋರಣೆಯ ರಾಜಕೀಯ ಶಕ್ತಿಯುತವಾದಾಗ, ಜನರು ತಮ್ಮ ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಗಮನ ಹರಿಸುವುದಿಲ್ಲ.ಬಿಜೆಪಿ ಆಡಳಿತದಲ್ಲಿ ದೇಶದಲ್ಲಿ ರೈತರಿಗೆ ಅಥವಾ ಮಧ್ಯಮ ಮತ್ತು ಸಣ್ಣ ಉದ್ಯಮಗಳಿಗೆ ಯಾವುದೇ ಬೆಂಬಲ ವ್ಯವಸ್ಥೆ ಇಲ್ಲ ಎಂದು ಆರೋಪಿಸಿದರು.
ವಯನಾಡ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
Decision Awaited: 2025ಕ್ಕೆ ನೀಟ್ ಆನ್‌ಲೈನ್: ಶೀಘ್ರವೇ ನಿರ್ಧಾರ
Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!
Parliament Session: ಮೀಸಲಾತಿ ಪರಾಮರ್ಶೆ: ದೇವೇಗೌಡರ ಆಗ್ರಹ
Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.