Mangaluru: ಡಿ.28; ಮಂಗಳೂರು ಕಂಬಳ; ಪೂರ್ವಭಾವಿ ಸಭೆ
Team Udayavani, Nov 6, 2024, 7:25 PM IST
ಮಂಗಳೂರು: ಕ್ಯಾ| ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿ.28ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಪೂರ್ವಭಾವಿ ಸಭೆಯು ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು.
ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಸಂಸದ ಕ್ಯಾ| ಬ್ರಿಜೇಶ್ ಚೌಟ ಉದ್ಘಾಟಿಸಿ ಮಾತನಾಡಿ, 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳ ಉತ್ತಮ ಜನಮನ್ನಣೆ ಗಳಿಸುತ್ತಿದ್ದು, ಇದು ಕರಾವಳಿಯ ಪ್ರವಾಸೋಧ್ಯಮಕ್ಕೆ ಮೈಲುಗಲ್ಲಾಗಲಿದೆ.
ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಮಾತನಾಡಿ, ಕಂಬಳ ಈ ಮಣ್ಣಿನ ಅಸ್ಮಿತೆ, ಅದನ್ನು ಮುಂದುವರಿಸಿಕೊಂಡು ಹೋಗಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಮಂಗಳೂರು ಕಂಬಳ ಮೇಲ್ಪಂಕ್ತಿಯಾಗಿದೆ ಎಂದರು.
ಜಿಲ್ಲಾ ಕಂಬಳ ಸಮಿತಿಯ ವಿಜಯಕುಮಾರ್ ಕಂಗಿನಮನೆ ಮಾತನಾಡಿ, ಮಂಗಳೂರು ನಗರದಲ್ಲಿ ನಡೆಯುವ ಕಂಬಳ ಜನಾಕರ್ಷಣೀಯ ಕೇಂದ್ರವಾಗುತ್ತಿದ್ದು, ಕಂಬಳಕ್ಕೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಸರ್ವ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಕಂಬಳ ಸಮಿತಿಯ ಪಿ.ಆರ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಹಾನಗರ ಪಾಲಿಕೆ ಸದಸ್ಯ ಹಾಗೂ ಮಂಗಳೂರು ಕಂಬಳ ಸಮಿತಿ ಉಪಾಧ್ಯಕ್ಷ ಕಿರಣ್ ಕುಮಾರ್, ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.