Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

ಎಸಿ ಕಚೇರಿ ಬಳಿ ಅಹೋರಾತ್ರಿ ಧರಣಿಗೆ ಸಿದ್ಧತೆ ವೇಳೆ ವಕ್ಫ್ ಹೆಸರಿಲ್ಲದ ಪಹಣಿ ಮುಂದಿಟ್ಟ ಕಂದಾಯ ಅಧಿಕಾರಿಗಳು!

Team Udayavani, Nov 6, 2024, 8:46 PM IST

Sedam-yathre

ಕಲಬುರಗಿ: ಮಠಕ್ಕೆ ಸೇರಿದ ಐದು ಎಕರೆ ಭೂಮಿಯ ಪಹಣಿಯಲ್ಲಿ ವಕ್ಫ್ ಹೆಸರು ಸೇರ್ಪಡೆಯಾಗಿದ್ದರ ವಿರುದ್ಧ ಮಠಾಧೀಶರು ಹಾಗೂ ರೈತರು ಸಿಡಿದೆದ್ದು ಪಾದಯಾತ್ರೆ ಕೈಗೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳು ದಿಢೀರನೇ ವಕ್ಫ್‌  ಎಂದು ನಮೂದು ಆಗಿರುವುದನ್ನೇ ತೆಗೆದು ಹಾಕಿರುವ ಅಪರೂಪದ ಪ್ರಕರಣ ಜಿಲ್ಲೆಯ ಸೇಡಂದಲ್ಲಿ ನಡೆದಿದೆ.

ಸೇಡಂ ತಾಲೂಕಿನ ತೊಟ್ನಳ್ಳಿ ಗ್ರಾಮದ ಮಹಾಂತೇಶ್ವರ ಮಠದ ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯರಿಗೆ ಸೇರಿದ 5.24 ಎಕರೆ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ಕಂಡು ಗಾಬರಿಯಾದ ಭಕ್ತರು, ಆಕ್ರೋಶಗೊಂಡು ಹೋರಾಟಕ್ಕೆ ಮುಂದಾದರು. ಇದಕ್ಕೆ ನಾನು ಕೈ ಜೋಡಿಸುತ್ತೇನೆ ಎಂದು ಡಾ. ಶಿವಮೂರ್ತಿ ಸ್ವಾಮೀಜಿ ತೊಟ್ನಳ್ಳಿ ಗ್ರಾಮದಿಂದ ಸೇಡಂನ ಸಹಾಯಕ ಆಯುಕ್ತರ ಕಚೇರಿವರೆಗೆ ಸುಮಾರು 20 ಕಿ.ಮೀ ಪಾದಯಾತ್ರೆ ಕೈಗೊಂಡರು.

ರೈತರ ಪಹಣಿಯಲ್ಲಿರುವ ವಕ್ಫ್‌ ಹೆಸರು ತೆಗೆದು ಹಾಕಿ:
ಬುಧವಾರ (ನ.6) ಬೆಳಿಗ್ಗೆ 6 ಗಂಟೆಗೆ ತೊಟ್ನಳ್ಳಿಯಿಂದ ಪಾದಯಾತ್ರೆ ಆರಂಭಿಸಿ ಸೇಡಂ ಎಸಿ ಕಚೇರಿಗೆ ಆಗಮಿಸಿ ಇನ್ನೇನು ಅಹೋರಾತ್ರಿ ಧರಣಿಗೆ ಮುಂದಾಗುವಷ್ಟರಲ್ಲಿ ಕಂದಾಯ ಅಧಿಕಾರಿಗಳು ಪಹಣಿಯಲ್ಲಿ ವಕ್ಫ್ ಹೆಸರು ತೆಗೆದು ಹಾಕಿರುವ ಪಹಣಿ ಮುಂದಿಟ್ಟರು. ಇದನ್ನು ಕಂಡು ಎಲ್ಲರಿಗೂ ಆಶ್ಚರ್ಯ. ಇದಕ್ಕೆ ಡಾ.ಶಿವಮೂರ್ತಿ ಸ್ವಾಮೀಜಿ ತಮ್ಮ ಮಠದ ಜಮೀನಿನ ಪಹಣಿಯಲ್ಲಿ ವಕ್ಫ್‌ ಹೆಸರು ತೆಗೆದು ಹಾಕಿದರೆ ಸಾಲದು. ತಾಲೂಕಿನ ಯಾವ ರೈತರ ಪಹಣಿಯಲ್ಲಿ ದಾಖಲಾಗಿರುವ ಹೆಸರು ತೆಗದು ಹಾಕಬೇಕು.‌ ನಿಯಮದಂತೆ ಶಾಶ್ವತವಾಗಿ ಅಳಿಸಿ ಹಾಕಬೇಕೆಂದರು.‌

ಅದಾಲತ್ ನಡೆಸಿ ವಕ್ಫ್‌ ಹೆಸರು ತೆಗೆದು ಹಾಕುವೆವು:
ಇದಕ್ಕೆ ಅಧಿಕಾರಿಗಳು ವಕ್ಫ್‌ ಅದಾಲತ್ ನಡೆಸಿ ವಕ್ಫ್‌ ಹೆಸರು ತೆಗೆದು ಹಾಕಲಾಗುವುದು.‌ ಇಪ್ಪತ್ತು ದಿನ ಅಥವಾ ತಿಂಗಳೊಳಗೆ ಪ್ರಕ್ರಿಯೆ  ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದರಿಂದ ತೊಟ್ನಳ್ಳಿ ಅಲ್ಲದೇ ತಾಲೂಕಿನ ವಿವಿಧ ಮಠಾಧೀಶರು ಅಹೋರಾತ್ರಿ ಧರಣಿ ಸತ್ಯಾಗ್ರಹದಿಂದ ಹಿಂದೆ ಸರಿದರು. ಪಾದಯಾತ್ರೆಯಲ್ಲಿ ವಿವಿಧ ಮಠಾಧೀಶರು ಪಾಲ್ಗೊಂಡಿದ್ದರು.

ವಕ್ಫ್ ಹೆಸರು ಸೇರ್ಪಡೆ ದೊಡ್ಡ ಹುನ್ನಾರ
ತೊಟ್ನಳ್ಳಿ ಮಠದ ಆಸ್ತಿಯಲ್ಲಿ ವಕ್ಫ್‌ ಹೆಸರು ರಾತ್ರಿ ಇದ್ದದ್ದು ಬೆಳಗಾಗುವುದರೊಳಗೆ ಅದೇಗೆ ಮಾಯವಾಯಿತು? ಎಂದು ರೈತರು ಆಶ್ಚರ್ಯ ವ್ಯಕ್ತಪಡಿಸಿದರು. ಇದೆಲ್ಲ ಸರ್ಕಾರದ ಕುತಂತ್ರದಿಂದ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತೊಟ್ನಳ್ಳಿ ಮಠದ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ತೆಗೆದು ಹಾಕಿರುವಂತೆ ಕಲಬುರಗಿ ಜಿಲ್ಲೆ, ವಿಜಯಪುರ ಜಿಲ್ಲೆಯ ಹೊನವಾಡ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ತೆಗೆದು ಹಾಕಬಹುದಲ್ಲ. ಒಟ್ಟಾರೆ ಜಮೀನಿನ ಪಹಣಿ ಹಾಗೂ ಮಠದ ಆಸ್ತಿಯಲ್ಲಿ ವಕ್ಫ್ ಹೆಸರು ಸೇರುವಲ್ಲಿ ದೊಡ್ಡ ಹುನ್ನಾರ ಅಡಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ-86: ಹೊಣೆಗಾರಿಕೆ ನುಣುಚಿಕೊಳ್ಳುವಿಕೆ ಹೇಡಿತನ

Udupi: ಗೀತಾರ್ಥ ಚಿಂತನೆ-86: ಹೊಣೆಗಾರಿಕೆ ನುಣುಚಿಕೊಳ್ಳುವಿಕೆ ಹೇಡಿತನ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Theft Case: ಕುಕ್ಕೆ; ದೇವಸ್ಥಾನದಿಂದ ಕಳವು; ಆರೋಪಿ ಸೆರೆ

Theft Case: ಕುಕ್ಕೆ; ದೇವಸ್ಥಾನದಿಂದ ಕಳವು; ಆರೋಪಿ ಸೆರೆ

Bantwala: ತಲೆಮರೆಸಿಕೊಂಡಿದ್ದ ಕಳವು ಆರೋಪಿ ಬಂಧನ

Bantwala: ತಲೆಮರೆಸಿಕೊಂಡಿದ್ದ ಕಳವು ಆರೋಪಿ ಬಂಧನ

Bantwal: ಟೆಂಪೋ ಹಿಂದಕ್ಕೆ ಸರಿದು ಮೂರರ ಹರೆಯದ ಮಗು ಸಾವು

Bantwal: ಟೆಂಪೋ ಹಿಂದಕ್ಕೆ ಸರಿದು ಮೂರರ ಹರೆಯದ ಮಗು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

BSY1

MUDA: ಸಿಎಂಗೆ ಪ್ರಾಮಾಣಿಕತೆ ಇದ್ದರೆ ಮುಡಾ ಪ್ರಕರಣ ಸಿಬಿಐಗೆ ವಹಿಸಲಿ: ಬಿ.ಎಸ್‌.ಯಡಿಯೂರಪ್ಪ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ

Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ

Zameer Ahmed: ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ: ಜಮೀರ್

Zameer Ahmed: ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ: ಜಮೀರ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ-86: ಹೊಣೆಗಾರಿಕೆ ನುಣುಚಿಕೊಳ್ಳುವಿಕೆ ಹೇಡಿತನ

Udupi: ಗೀತಾರ್ಥ ಚಿಂತನೆ-86: ಹೊಣೆಗಾರಿಕೆ ನುಣುಚಿಕೊಳ್ಳುವಿಕೆ ಹೇಡಿತನ

Aranthodu ಸಂಪಾಜೆ: ಮರ ಬಿದ್ದು ಮನೆಗೆ ಹಾನಿ

Aranthodu ಸಂಪಾಜೆ: ಮರ ಬಿದ್ದು ಮನೆಗೆ ಹಾನಿ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.