Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಅಂಕೂರ್ ರಾಣ ಬಂಧನ
Team Udayavani, Nov 7, 2024, 7:15 AM IST
ಮಡಿಕೇರಿ: ಕೊಡಗು ಜಿಲ್ಲೆಯ ಸುಂಟಿಕೊಪ್ಪ ವ್ಯಾಪ್ತಿಯ ಕಾಫಿ ತೋಟವೊಂದರಲ್ಲಿ ದೊರೆತ ಅರೆಸುಟ್ಟ ಮೃತದೇಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪದಡಿ ತನಿಖೆ ಎದುರಿಸಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಹರಿಯಾಣ ರಾಜ್ಯದ ಕಾರ್ನಲ್ ಗರುಂದ ನಿವಾಸಿ ಅಂಕೂರ್ ರಾಣ(30) ಎಂಬಾತನನ್ನು ಕೊಡಗು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತೆಲಾಂಗಣ ರಾಜ್ಯದಲ್ಲಿ ಸ್ಥಳ ಮಹಜರು ಮಾಡಲು ತೆರಳಿದ ಸಂದರ್ಭ ಮೂವರು ಆರೋಪಿಗಳಲ್ಲಿ ಅಂಕೂರ್ ರಾಣ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಹರಿಯಾಣ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಸತತ 6 ದಿನಗಳಿಂದ ಕಾರ್ಯಾಚರಣೆ ನಡೆಸಿ ರಾಜಸ್ಥಾನದ ಕೋಟಾ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪತಿಯನ್ನೇ ಕೊಲೆ ಮಾಡಲು ಸಂಚು ರೂಪಿಸಿದ ತೆಲಂಗಾಣ ರಾಜ್ಯದ ಯಾದಾದ್ರಿ ಜಿಲ್ಲೆಯ ಮೋಂಗಿರ್ ನಗರದ ನಿಹಾರಿಕಾ ತನ್ನ ಸ್ನೇಹಿತ ಹರಿಯಾಣ ಮೂಲದ ಅಂಕೂರ್ ರಾಣನ ಸಹಾಯ ಪಡೆದಿದ್ದಾಳೆ. ಡ್ರಾಪ್ ಮಾಡುವ ನೆಪದಲ್ಲಿ ಪತಿ ರಮೇಶ್ ಕುಮಾರ್ ನ ಕಾರಿನಲ್ಲಿ ಬಂದ ಇಬ್ಬರು ಉಪ್ಪಳ್-ಭುವನಗಿರಿ ನಡುವಿನ ಹೆದ್ದಾರಿಯ ಬಳಿ ಕಾರನ್ನು ಬದಿಗೆ ನಿಲ್ಲಿಸಿದ್ದಾರೆ. ನಂತರ ಇಬ್ಬರು ಸೇರಿ ರಮೇಶ್ ಕುಮಾರ್ ನನ್ನು ಕೊಲೆ ಮಾಡಿದ್ದಾರೆ. ನಂತರ ಬೆಂಗಳೂರಿನ ಹೊರಮಾವು ಎಂಬಲ್ಲಿಗೆ ಬರುವ ನಿಹಾರಿಕಾ ತನ್ನ ಮತ್ತೂಬ್ಬ ಸ್ನೇಹಿತ ನಿಖೀಲ್ ಬಳಿ ಕೊಲೆಯ ವಿಚಾರ ತಿಳಿಸುತ್ತಾಳೆ. ಶವವನ್ನು ಯಾರಿಗೂ ಸಿಗದಂತೆ ನಾಶ ಮಾಡುವ ಉದ್ದೇಶದಿಂದ ಸುಂಟಿಕೊಪ್ಪ ಬಳಿಯ ತೋಟಕ್ಕೆ ತಂದು ಬೆಂಕಿ ಹಚ್ಚಿ ಆರೋಪಿಗಳು ಕಾರಿನಲ್ಲಿ ಮರಳಿದ್ದಾರೆ ಎನ್ನುವ ಆರೋಪದಡಿ ತನಿಖೆ ನಡೆಸಲಾಗುತ್ತಿತ್ತು. ನಿಹಾರಿಕಾ ಹಾಗೂ ನಿಖೀಲ್ ಈಗಾಗಲೇ ಬಂಧನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್ ಸ್ಟಾಪ್ ಎಂದ ಮೋಕ್ಷಿತಾ; ಒಂಟಿಯಾದ ಮಂಜು
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Jammu-Kashmir: ಕುಪ್ವಾರದಲ್ಲಿ ಸೇನಾ ಕಾರ್ಯಾಚರಣೆ… ಉಗ್ರನ ಹ*ತ್ಯೆ, ಶಸ್ತ್ರಾಸ್ತ್ರ ವಶ
Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ
Lalbag: ಪ್ಲಾಸ್ಟಿಕ್ ನಿಷೇಧ ಜಾರಿಗೆ ತಂಡಗಳ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.