Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Team Udayavani, Nov 6, 2024, 10:25 PM IST
ಗದಗ: ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ಮಾಡಲು ಯತ್ನಿಸಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ನವೆಂಬರ್ 6ರಂದು ಸೈಬರ್ ವಂಚಕರು ಬಿ.ಎಸ್. ನೇಮಗೌಡ ಐಪಿಎಸ್ ಎಂಬ ನಕಲಿ ಫೇಸ್‌ಬುಕ್ ಐಡಿಯಲ್ಲಿ ಗದಗ ಜಿಲ್ಲೆಯ ಎಸ್‌ಪಿ ಅವರ ಪೊಟೋವನ್ನು ಫ್ರೊಫೈಲ್ ಆಗಿ ಇಟ್ಟುಕೊಂಡು ಮತ್ತು ವಾಟ್ಸಾಪ್ ಡಿಪಿಯಾಗಿ ಫೊಟೊವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮೋಸ ಮಾಡಲು ಪ್ರಯತ್ನಿಸುತ್ತಿದ್ದ ಬಗ್ಗೆ ಮಾಹಿತಿ ಬಯಲಾಗಿದ್ದು, ತನಿಖೆ ಮುಂದುವರೆದಿದೆ.
ಈ ಕುರಿತು ಗದಗ ಸಿಇಎನ್ ಪೊಲೀಸ್ ಠಾಣೆಯಲ್ಲಿ 71/2024 ಕಲಂ 66(ಡಿ)ಐ.ಟಿ ಆ್ಯಕ್ಟ-2008 ಮತ್ತು 319(2) ಬಿಎನ್‌ಎಸ್ ನೇ ಪ್ರಕರಣದಲಿ ಫೇಕ್ ಫೇಸ್‌ಬುಕ್ ಐಡಿ ಮುಖಾಂತರ ವಂಚನೆ ಮಾಡಲು ಪ್ರಯತ್ನಿಸುತ್ತಿರುವ ಕುರಿತು ಪ್ರಕರಣ ದಾಖಲಾಗಿದೆ.
ಸೈಬರ್ ವಂಚಕರು ಗದಗ ಎಸ್ಪಿ ಹೆಸರಿನಲ್ಲಿ ಫೇಕ್ ಫೇಸ್‌ಬುಕ್ ಐಡಿ ಕ್ರಿಯೆಟ್ ಮಾಡಿ ಮತು ಮೆಸೆಂಜ್‌ರ ಖಾತೆ ಹಾಗೂ ವಾಟ್ಸಾಪ್ ಖಾತೆ ತೆರೆದು ಅವುಗಳಲ್ಲಿ ಗದಗ ಜಿಲ್ಲೆಯ ಎಸ್‌ಪಿ ರವರ ಫೊಟೋವನ್ನು ಡಿಪಿ ಹಾಗೂ ಪ್ರೋಫೈಲ್ ಪೋಟೊ ಆಗಿ ಇಟ್ಟುಕೊಂಡು ಆ ಮೂಲಕ ಬೇರೆ ಬೇರೆ ಕಾರಣಗಳನ್ನು ಹೇಳಿ ಸಾರ್ವಜನಿಕರಿಗೆ ವಂಚನೆ ಮಾಡುವ ಪ್ರಯತ್ನದಲ್ಲಿದ್ದು, ಕಾರಣ ಯಾವುದೇ ಸಾರ್ವಜನಿಕರು ಮೋಸ ಹಾಗೂ ವಂಚನೆಗೆ ಒಳಗಾಗಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
ಇದನ್ನೂ ಓದಿ: BMTC: ಬಸ್ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ; ಪ್ರಯಾಣಿಕರ ರಕ್ಷಿಸಿದ ನಿರ್ವಾಹಕ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.