Bantwal: ಟೆಂಪೋ ಹಿಂದಕ್ಕೆ ಸರಿದು ಮೂರರ ಹರೆಯದ ಮಗು ಸಾವು
Team Udayavani, Nov 6, 2024, 11:33 PM IST
ಬಂಟ್ವಾಳ: ನಿಲ್ಲಿಸಿದ್ದ ಮಿನಿ ಗೂಡ್ಸ್ ಟೆಂಪೋವೊಂದು ಏಕಾಏಕಿ ಹಿಮ್ಮುಖವಾಗಿ ಚಲಿಸಿದ್ದು, ಈ ವೇಳೆ ಆಟವಾಡುತ್ತಿದ್ದ ಮೂರರ ಹರೆಯದ ಮಗು ಟೆಂಪೋ ಚಕ್ರದಡಿಗೆ ಸಿಲುಕಿ ಮೃತಪಟ್ಟ ಘಟನೆ ಬುಧವಾರ ಬಂಟ್ವಾಳದ ಲೊರೆಟ್ಟೋಪದವಿನ ಟಿಪ್ಪುನಗರದಲ್ಲಿ ನಡೆದಿದೆ.
ಫರಂಗಿಪೇಟೆ ಸಮೀಪದ ಪತ್ತನಬೈಲು ನಿವಾಸಿ ಉನೈಸ್ ಅವರ ಪುತ್ರಿ ಆಶೀಕಾ ಮೃತ ಮಗು. ಉನೈಸ್ ಅವರ ಪತ್ನಿಯ ತಾಯಿ ಮನೆ ಲೊರೆಟ್ಟೋಪದವಿನಲ್ಲಿದ್ದು, ಮನೆಯ ಹೊರಗೆ ಮಗು ಆಡುತ್ತಿತ್ತು. ಈ ವೇಳೆ ಅಂಗಳದಲ್ಲಿ ನಿಲ್ಲಿಸಿದ್ದಮಗುವಿನ ತಾಯಿಯ ಸಹೋದರನ ಟೆಂಪೋ ಏಕಾಏಕಿ ಹಿಂದಕ್ಕೆ ಬಂದಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಮಗುವನ್ನು ತತ್ಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಘಟನೆಯ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.