MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನನ್ನ ಬಳಿಯಿಲ್ಲ
Team Udayavani, Nov 7, 2024, 1:03 AM IST
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ, ಸತ್ಯವನ್ನು ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಲೋಕಾಯುಕ್ತ ಕಚೇರಿಯಲ್ಲಿ ಬುಧವಾರ ವಿಚಾರಣೆಗೆ ಹಾಜರಾಗಿ ಹೊರಬಂದ ಬಳಿಕ ಸುದ್ದಿಗಾರರೊಂದಿಗೆ ಸಿಡಿಮಿಡಿಯಿಂದಲೇ ಪ್ರತಿಕ್ರಿಯಿಸಿ, ಎಲ್ಲವನ್ನೂ ಲೋಕಾಯುಕ್ತ ಪೊಲೀಸರು ರೆಕಾರ್ಡ್ ಮಾಡಿದ್ದಾರೆ. ಸುಳ್ಳು ಕೇಸ್ ಹಾಕಿದ್ದಾರೆ, ವಿಚಾರಣೆ ಮಾಡಿದ್ದಾರೆ. ಇದರಲ್ಲಿ ನನಗೇಕೆ ಮುಜುಗರ. ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ ಎಂದು ಹೇಳಿದ ಸಿದ್ದರಾಮಯ್ಯ ಅವರು, ಪತ್ರಕರ್ತರು ಹಲವು ಪ್ರಶ್ನೆಗಳನ್ನು ಮುಂದಿಟ್ಟಾಗ ರೇಗಾಡಿದ ಪ್ರಸಂಗವೂ ನಡೆಯಿತು.
ನಿವೇಶನ ಹಂಚಿಕೆ ಕಾನೂನು ಬದ್ಧವಾಗಿಯೇ ಆಗಿದೆ. ಬಿಜೆಪಿ, ಜೆಡಿಎಸ್‌ನವರು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದ ರಿಂದ ನನ್ನ ಪತ್ನಿ ನಿವೇಶನಗಳನ್ನು ವಾಪಸ್ ನೀಡಿದ್ದಾರೆಯೇ ಹೊರತು, ತಪ್ಪು ಮಾಡಿದ್ದಕ್ಕಾಗಿ ನಿವೇಶನಗಳನ್ನು ವಾಪಸ್ ನೀಡಿಲ್ಲ. ಈ ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನನ್ನ ಬಳಿಯಿಲ್ಲ ಹಾಗೂ ನನ್ನಿಂದ ಯಾವುದೇ ದಾಖಲೆ ಕೇಳಲಾಗಿಲ್ಲ. ನ್ಯಾಯಾಲಯದಲ್ಲಿ ತೀರ್ಮಾನವಾಗುವವರೆಗೆ ನನ್ನ ರಾಜಕೀಯ ಜೀವನಕ್ಕೆ ಯಾವುದೇ ಕಪ್ಪು ಮಸಿ ಇಲ್ಲ. ನನ್ನ ಮೇಲೆ ಮಾಡಲಾಗಿರುವ ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲಿ ತಕ್ಕ ಉತ್ತರವನ್ನು ನೀಡಲಿದ್ದೇವೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.