CCTV Footage: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಅವಘಡ… ಯುವತಿ ಬದುಕುಳಿದಿದ್ದೇ ಪವಾಡ
Team Udayavani, Nov 7, 2024, 10:57 AM IST
ಕಣ್ಣೂರು: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಯುವತಿಯೊಬ್ಬಳು ಪ್ಲಾಟ್‌ಫಾರ್ಮ್ ನಿಂದ ರೈಲು ಹಳಿಗೆ ಬಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಭಾನುವಾರ(ನ.3) ರಂದು ಕೇರಳದ ಕಣ್ಣೂರಿನಲ್ಲಿ ಸಂಭವಿಸಿದೆ.
ಘಟನೆಯ ದೃಶ್ಯ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಮೈ ಜುಮ್ ಎನ್ನುವಂತಿದೆ.
ಸಿಸಿ ದೃಶ್ಯಾವಳಿಯಲ್ಲಿ ಏನಿದೆ:
ಭಾನುವಾರ ಬೆಳಿಗ್ಗೆ ಸುಮಾರು 7.30 ರ ಸಮಯದಲ್ಲಿ ಯುವತಿಯೊಬ್ಬಳು ರೈಲಿನಲ್ಲಿ ಪ್ರಯಾಣಿಸಲು ರೈಲು ನಿಲ್ದಾಣಕ್ಕೆ ಬಂದಿದ್ದಾಳೆ ಆದರೆ ರೈಲು ಹೊರಡಲು ಕೆಲವೇ ಸಮಯ ಇರುವ ಹೊತ್ತಿಗೆ ಯುವತಿ ಪಕ್ಕದಲ್ಲೇ ಇದ್ದ ಅಂಗಡಿಯಲ್ಲಿ ತಿಂಡಿ ಖರೀದಿಸಲು ಬಂದಿದ್ದಾಳೆ ಅಷ್ಟೋತ್ತಿಗಾಗಲೇ ರೈಲು ಹೊರಟಿದೆ ಇತ್ತ ತಿಂಡಿ ಕೈಯಲ್ಲಿ ಹಿಡಿದು ದುಡ್ಡು ಕೊಡಬೇಕು ಎನ್ನುವಷ್ಟರಲ್ಲಿ ಯುವತಿ ರೈಲು ಚಲಿಸುತ್ತಿರುವುದನ್ನು ಕಂಡಿದ್ದಾಳೆ ಕೂಡಲೇ ಯುವತಿ ತಿಂಡಿ ಪ್ಯಾಕೆಟ್ ಅಂಗಡಿಯಾತನಿಗೆ ನೀಡಿ ರೈಲು ಹತ್ತಲು ಬಂದಿದ್ದಾಳೆ ಈ ವೇಳೆ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಯುವತಿ ಆಯತಪ್ಪಿ ಪ್ಲಾಟ್‌ಫಾರ್ಮ್ ನಿಂದ ಕೆಳಗೆ ಬಿದ್ದಿದ್ದಾಳೆ ಕೂಡಲೇ ಅಲ್ಲಿದ್ದ ಜನ ಯುವತಿಯ ರಕ್ಷಣೆಗೆ ಮುಂದಾದರೂ ಸಹಾಯ ಮಾಡಲು ಸಾಧ್ಯವಾಗಲಿಲ್ಲ ಕೂಡಲೇ ರೈಲು ನಿಲ್ಲಿಸಿದ ಪರಿಣಾಮ ಯುವತಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾಳೆ.
ಬಳಿಕ ಆಕೆಗೆ ರೈಲ್ವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಇದನ್ನೂ ಓದಿ: ತಹಶೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.