Puttur: ಲಕ್ಕಿ ಡ್ರಾ ನಂಬಿ ಹಣ ಕಳೆದುಕೊಂಡ ಕೂಲಿ ಕಾರ್ಮಿಕ
Team Udayavani, Nov 7, 2024, 9:00 PM IST
ಪುತ್ತೂರು: ಲಕ್ಕಿ ಡ್ರಾ ಎಂಬ ಮಾತು ನಂಬಿ ಪುಣಚದ ಕೂಲಿ ಕಾರ್ಮಿಕರೋರ್ವರು ಹಣ ಕಳೆದುಕೊಂಡ ಘಟನೆ ನಡೆದಿದೆ.
ನಿಮ್ಮ ಮೊಬೈಲ್ ನಂಬರ್ ಲಕ್ಕಿ ಡ್ರಾದಲ್ಲಿ ಆಯ್ಕೆಯಾಗಿದ್ದು, ನಿಮಗೆ ಮೊಬೈಲ್ ಬಹುಮಾನ ಇದೆ. ವಿಳಾಸ ಕಳುಹಿಸಿದರೆ ಮೊಬೈಲ್ ತಲುಪಿಸುತ್ತೇವೆ ಎಂದು ಅಪರಿಚಿತ ವ್ಯಕ್ತಿಯೋರ್ವ ದೂರವಾಣಿ ಮೂಲಕ ತಿಳಿಸಿದ್ದ. ಇದಕ್ಕೆ ಕೂಲಿ ಕಾರ್ಮಿಕ ನನಗೆ ಮೊಬೈಲ್ ಬೇಡ ಎಂದು ಹೇಳಿ ಕರೆ ಕಟ್ ಮಾಡಿದ್ದರು. ಇದಾದ ಬಳಿಕ ಮತ್ತೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಕೂಲಿ ಕಾರ್ಮಿಕರನ್ನು ನಂಬಿಸುವಲ್ಲಿ ಯಶಸ್ವಿಯಾಗಿದ್ದ.
ಮರುದಿನ ಕರೆ ಮಾಡಿದ ಆತ ನೀವು ಹೇಳಿದ ವಿಳಾಸಕ್ಕೆ ಮೊಬೈಲ್ ಕಳುಹಿಸಿದ್ದು, ಅಂಚೆಯಿಂದ ನೀವು ಪಡೆದುಕೊಳ್ಳಬೇಕಾದರೆ 1,600 ರೂ. ಪಾವತಿಸುವಂತೆ ಆತ ಹೇಳಿದ್ದ. ಅದರಂತೆ ಹಣ ಪಾವತಿಸಿ ಪಾರ್ಸೆಲ್ ಪಡೆದುಕೊಂಡಾಗ ಅದರಲ್ಲಿ ಹಾಳಾದ ಮೊಬೈಲ್ವೊಂದರ ಬಿಡಿಭಾಗ ಮಾತ್ರ ಇತ್ತು. ಅನಂತರ ಅವರಿಗೆ ತಾನು ಮೋಸ ಹೋಗಿರುವುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Maharashtra: ಕಾಂಗ್ರೆಸ್ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು
Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್ ಡೋನಾಲ್ಡಾ ಪಾಯಸ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.