![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Nov 7, 2024, 9:10 PM IST
ಮಂಗಳೂರು: ಗುರುಪುರ ಅಡ್ಡೂರು ಸಮೀಪದ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಕಾರಿಗಳು ದಾಳಿ ನಡೆಸಿದ್ದು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.
ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ನೀರಿನಲ್ಲಿ ಮುಳುಗಿಸಿಟ್ಟ ದೋಣಿಗಳು
ಸ್ಥಳದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ.
ಮಂಗಳೂರು ಉಪವಿಭಾಗಾ ಧಿಕಾರಿ ಹರ್ಷವರ್ಧನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆಯ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.
You seem to have an Ad Blocker on.
To continue reading, please turn it off or whitelist Udayavani.