Puttur: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Team Udayavani, Nov 7, 2024, 9:50 PM IST
ಪುತ್ತೂರು: ಎರಡು ವರ್ಷಗಳ ಹಿಂದೆ ಪುತ್ತೂರು ದರ್ಬೆಯ ಖಾಸಗಿ ಆಸ್ಪತ್ರೆಯಿಂದ ಜನರೇಟರ್ ಬ್ಯಾಟರಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿ ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಕೇರಳದ ಕೊಳ್ಳಂ ನಿವಾಸಿ ಇಟ್ಟಿ ಪಣಿಕರ್ ಬಂಧಿತ ಆರೋಪಿ. ಈತ 2022ರ ಸೆಪ್ಟೆಂಬರ್ ತಿಂಗಳಲ್ಲಿ ಹಿತ ಆಸ್ಪತ್ರೆಯ ಜನರೇಟರ್ನ ಬ್ಯಾಟರಿ ಕಳವು ಮಾಡಿದ್ದ. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ಜಾಮೀನು ಮಂಜೂರು ಮಾಡಿತ್ತು. ಅನಂತರ ಆರೋಪಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.