Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
ಸಾವಿರಾರು ವರ್ಷಗಳಿಂದ ಮಂದಿರ, ಮಠಗಗಳಿವೆ ಅವು ಹೇಗೆ ವಕ್ಫ್ ಆಸ್ತಿ?: ಸಂಸದ ಪ್ರಶ್ನೆ
Team Udayavani, Nov 7, 2024, 10:31 PM IST
ಬೆಳಗಾವಿ: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ. ಇದು ಕರ್ನಾಟಕದಲ್ಲಿ ಇರುವ ಹೊಸ ಗಾದೆ ಮಾತು ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಸುದ್ದಿಗಾರರ ಜತೆ ಗುರುವಾರ ಮಾತನಾಡಿ, ರಾಜ್ಯದಲ್ಲಿ ಈಗ ಎಲ್ಲಿ ನೋಡಿದರೂ ಇದು ವಕ್ಫ್ ಆಸ್ತಿ ಎನ್ನುತ್ತಿದ್ದಾರೆ. ಇದರಿಂದ ಜನರು ಆತಂಕಗೊಂಡಿದ್ದಾರೆ. ಗ್ರಾಮೀಣ ಪ್ರದೇಶದ ಜನರು, ವಿಶೇಷವಾಗಿ ರೈತರು ಬಹಳ ಹೆದರಿದ್ದಾರೆ. ಇದು ಸರ್ಕಾರಕ್ಕೆ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದರು.
ಕರ್ನಾಟಕದಲ್ಲಿ ಒಂದು ಲಕ್ಷ ವಕ್ಪ್ ಎಕರೆಗೂ ಅಧಿಕ ಆಸ್ತಿ ಇದೆ. ಅದರಲ್ಲಿ 23 ಸಾವಿರ ಎಕರೆ ಮಾತ್ರ ನಮ್ಮ ಕೈಯಲ್ಲಿ ಇದೆ. ಉಳಿದ ಆಸ್ತಿ ಅತಿಕ್ರಮಣ ಆಗಿದೆ ಎಂದು ಹೇಳುತ್ತಾರೆ. ಅದೇ ರೀತಿ ಮುಜರಾಯಿ ಇಲಾಖೆಯಲ್ಲೂ ಅತಿಕ್ರಮಣ ಆಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಪ್ರತಿಶತ 80ರಷ್ಟು ಮಂದಿ ಇರುವ ಜನರ ಬಳಿ 30 ಸಾವಿರ ಎಕರೆ ಆಸ್ತಿ ಇದೆ. ಆದರೆ ಶೇ. 15ರಷ್ಟು ಇರುವ ಜನರ ಬಳಿ ಒಂದು ಲಕ್ಷ ಆಸ್ತಿ ಇರಲು ಸಾಧ್ಯವೇ?. ಸಾವಿರಾರು ವರ್ಷಗಳಿಂದ ಮಂದಿರ, ಮಠಗಳು ನಡೆದುಕೊಂಡು ಬಂದಿವೆ. ಇವೆಲ್ಲ ವಕ್ಪ್ ಆಸ್ತಿ ಎಂದರೆ ಹೇಗೆ ಎಂದು ಪ್ರಶ್ನಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.