Bengaluru: ಬಿಷಪ್ ಕಾಟನ್ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್: ಆತಂಕ
ಪೊಲೀಸರ ಪರಿಶೀಲನೆ ವೇಳೆ ಪತ್ತೆಯಾಗದ ಸ್ಫೋಟಕ ವಸ್ತುಗಳು
Team Udayavani, Nov 8, 2024, 1:04 PM IST
ಬೆಂಗಳೂರು: ಶಾಲಾ-ಕಾಲೇಜುಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶಗಳು ಮತ್ತೆ ಮುಂದುವರಿದೆ. ನಗರದ ಪ್ರತಿಷ್ಠಿತ ಶಾಲೆಯೊಂದಕ್ಕೆ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿ ಆತಂಕ ಸೃಷ್ಟಿಸಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಷಪ್ ಕಾಟನ್ ಬಾಲಕ ಹಾಗೂ ಬಾಲಕಿಯರ ಶಾಲೆಗೆ ಗುರುವಾರ ಶೇಖರ್ ವೆಂಕಟರಾಮನ್ ಎಂಬ ಹೆಸರಿನ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮುಂಜಾನೆ 6.30ರ ಸುಮಾರಿಗೆ ಶಾಲೆಯ ವೆಬ್ಸೈಟ್ ಹಾಗೂ ಇ-ಮೇಲ್ಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದರು. ಸಂಜೆ 4 ಗಂಟೆ ಸುಮಾರಿಗೆ ಇ-ಮೇಲ್ ಪರಿಶೀಲನೆ ನಡೆಸುತ್ತಿದ್ದ ವೇಳೆ ಆಡಳಿತ ಮಂಡಳಿಯ ಗಮನಕ್ಕೆ ಬಂದಿದೆ. ಕೂಡಲೇ ಶಾಲಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಬಾಂಬ್ ನಿಷ್ಕ್ರಿಯ ದಳ, ಬಾಂಬ್ ತಪಾಸಣೆ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ, ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಶಾಲಾ ಆವರಣದಲ್ಲಿ ಪರಿಶೀಲಿಸಿದ್ದಾರೆ.
ಈ ವೇಳೆ ಶಾಲಾ ಆವರಣದಲ್ಲಿ ಯಾವುದೇ ಸ್ಫೋಟಕ ವಸ್ತುಗಳಾಗಲಿ, ರಾಸಾಯನಿಕ ಪದಾರ್ಥ ಗಳಾಗಲಿ ಪತ್ತೆ ಆಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂಬುದು ದೃಢವಾಯಿತು ಎಂದು ಪೊಲೀಸರು ಮಾಹಿತಿ ನೀಡಿದರು.
ಈ ಹಿಂದೆ ಹನುಮಂತ ನಗರ, ಸದಾಶಿವನಗರ, ವಿ.ವಿ ಪುರ ಪೊಲೀಸ್ ಠಾಣಾ ವ್ಯಾಪ್ತಿಯ 3 ಎಂಜಿನಿಯರಿಂಗ್ ಕಾಲೇಜುಗಳ ಇ-ಮೇಲ್ಗೂ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.