Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
ಸಿಸಿ ಕೆಮರಾ ಅಳವಡಿಸಿ; ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಆಗ್ರಹ
Team Udayavani, Nov 8, 2024, 2:42 PM IST
ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಹೊಂಬಾಡಿ ಮಂಡಾಡಿ ಗ್ರಾ.ಪಂ. ವ್ಯಾಪ್ತಿಯ ತಲ್ಮಕ್ಕಿ ಕಾಂಪ್ಲೆ ಕ್ಸ್‌ನ ಮುಂಭಾಗದಲ್ಲಿ ತಡರಾತ್ರಿ ಐಶಾರಾಮಿ ಕಾರಿನಲ್ಲಿ ಬಂದ ಮೂವರು ಮುಸುಕುಧಾರಿಗಳು ದನಗಳನ್ನು ಕಳವುಗೈಯುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ.
ಇಲ್ಲಿನ ಹುಣ್ಸೆಮಕ್ಕಿ ಮೇಲ್‌ಪೇಟೆ ಹಾಗೂ ಕೆಳಪೇಟೆಯ ಅಂಗಡಿ ಮುಂಗಟ್ಟಿನ ಬಳಿ ದನಗಳು ಮಲಗುತ್ತಿದ್ದು, ತಡರಾತ್ರಿ ಮುಸುಕುಧಾರಿಗಳ ತಂಡವು ದನಗಳಿಗೆ ಆಹಾರ ನೀಡುವ ನೆಪದಲ್ಲಿ ಸಮೀಪಕ್ಕೆ ತೆರಳಿ ಅವುಗಳನ್ನು ಕಾರಿನ ಢಿಕ್ಕಿಯಲ್ಲಿ ಹಿಂಸಾತ್ಮಕವಾಗಿ ತುಂಬಿಸಿಕೊಂಡು ಹೋಗುವ ದೃಶ್ಯವು ಇಲ್ಲಿನ ಕಾಂಪ್ಲೆಕ್ಸ್ ನಲ್ಲಿ ಅಳವಡಿಸಿದ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.
ಸೂಕ್ತ ಕ್ರಮಕ್ಕೆ ಆಗ್ರಹ
ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನತೆ ಹಸುಗಳನ್ನು ಮೇವಿಗಾಗಿ ಹೊರ ಬಿಡಲಾಗುತ್ತಿದ್ದು, ಅವುಗಳು ಆಹಾರ ಅರಸಿ ಪ್ರಮುಖ ಭಾಗಗಳಿಗೆ ಬರುವ ಪರಿಣಾಮ ದನಗಳ ನಾಪತ್ತೆ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ.
ಮಾರಕಾಸ್ತ್ರಗಳೊಂದಿಗೆ ಬರುವ ಮುಸುಕುಧಾರಿಗಳಿಂದ ಆತಂಕ
ಮುಸುಕುಧಾರಿ ಕಳ್ಳರು ಮಾರಕಾಸ್ತ್ರಗಳನ್ನು ಇರಿಸಿಕೊಂಡು ಬರುವುದರಿಂದ ಸ್ಥಳೀಯ ಗ್ರಾಮಸ್ಥರು ರಾತ್ರಿ ವೇಳೆಯಲ್ಲಿ ಸಂಚರಿಸುವಾಗ ಆತಂಕದ ನಡುವೆ ಸಂಚರಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪೊಲೀಸ್ ಇಲಾಖೆ ಗ್ರಾಮದ ಪ್ರಮುಖ ಭಾಗಗಳಲ್ಲಿ ಸಿಸಿ ಕೆಮರಾವನ್ನು ಅಳವಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಪೂಜಾರಿ ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.