PM Poshan: ಶಾಲಾ ಮಕ್ಕಳ ಮೊಟ್ಟೆಗೂ ಕನ್ನ ತಪ್ಪಿತಸ್ಥರ ವಿರುದ್ಧ ಕ್ರಮ ಅಗತ್ಯ


Team Udayavani, Nov 9, 2024, 5:10 PM IST

School-Chikki

ಮಕ್ಕಳಿಗೆ ಪೋಷಕಾಂಶಭರಿತ ಆಹಾರವನ್ನು ನೀಡುವ ಉದ್ದೇಶದೊಂದಿಗೆ ರಾಜ್ಯ ಸರಕಾರ ಪಿಎಂ ಪೋಷಣ್‌ ಯೋಜನೆಯಡಿ ಒಂದರಿಂದ ಹತ್ತನೇ ತರಗತಿ ವರೆಗಿನ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ನೀಡುವ ಯೋಜನೆಯನ್ನು ಜಾರಿಗೊಳಿಸಿತ್ತು. ಇದಕ್ಕೆ ಪೂರಕವಾಗಿ ಅಜೀಂ ಪ್ರೇಮ್‌ಜೀ ಫೌಂಡೇಶನ್‌(ಎಪಿಎಫ್) ಮಕ್ಕಳಿಗೆ ವಾರದ ಆರು ದಿನ ಮೊಟ್ಟೆ ನೀಡಲು ಮುಂದೆ ಬಂದಿತ್ತು.

ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ನೀಡಲು ನಿರ್ಧರಿಸಲಾಗಿತ್ತು. ಮಕ್ಕಳಿಗೆ ಮೊಟ್ಟೆ ನೀಡುವ ವಿಷಯದಲ್ಲಿ ಆರಂಭದಲ್ಲಿಯೇ ಮಕ್ಕಳ ಹೆತ್ತವರು ಮತ್ತು ಶಿಕ್ಷಕರಿಂದಲೂ ಒಂದಿಷ್ಟು ವಿರೋಧ ವ್ಯಕ್ತವಾಗಿ­ತ್ತಾದರೂ ಬಳಿಕ ತಣ್ಣಗಾಗಿ ಮೊಟ್ಟೆ ವಿತರಣೆ ಆರಂಭಗೊಂಡಿತ್ತು. ಏತನ್ಮಧ್ಯೆ ಮೊಟ್ಟೆ ವಿತರಣೆಯಲ್ಲಿ ಅಕ್ರಮ ನಡೆಯುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಿಸುವ ಸರಕಾರದ ಉಪಕ್ರಮಕ್ಕೆ ಬಾಧಿಸಿದ್ದ ಬಾಲಗ್ರಹ ಪೀಡೆ ಇನ್ನೂ ತೊಲಗಿದಂತೆ ಕಾಣುತ್ತಿಲ್ಲ. ಮಕ್ಕಳಿಗೆ ಮೊಟ್ಟೆ ವಿತರಿಸುವು­ದಕ್ಕೆ ಸಂಬಂಧಿಸಿದಂತೆ ಶಾಲೆಗಳಲ್ಲಿ ತಲೆದೋರಿರುವ ಸಮಸ್ಯೆಗಳು, ಸೃಷ್ಟಿಯಾಗಿ­ರುವ ಅವಾಂತರಗಳು ಇನ್ನೂ ಮುಂದುವರಿದಿದ್ದರೂ ಅರೆಮನಸ್ಸಿನಿಂದಲೇ ಮಕ್ಕಳಿಗೆ ಮೊಟ್ಟೆ ನೀಡುವ ಕಾರ್ಯದಲ್ಲಿ ಶಿಕ್ಷಕರು ಮತ್ತು ಸಿಬಂದಿ ತೊಡಗಿಸಿ­ಕೊಂಡಿದ್ದಾರೆ.

ಈ ಯೋಜನೆಯಲ್ಲಿ ಕೈಜೋಡಿಸಿರುವ ಎಪಿಎಫ್ ನ ತಂಡ, ಯೋಜನೆಯ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸುವ ಸಲುವಾಗಿ ನಾಲ್ಕು ವಿಭಾಗದ ಶಾಲೆಗಳಿಗೆ ಭೇಟಿ ನೀಡಿದಾಗ ಮೊಟ್ಟೆ ವಿತರಣೆಯಲ್ಲಿ ಅಕ್ರಮ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕೆಲವು ಶಾಲೆಗಳಲ್ಲಿ ಇದುವರೆಗೂ ಮಕ್ಕಳಿಗೆ ಮೊಟ್ಟೆಯನ್ನು ವಿತರಿಸಲು ಆರಂಭಿಸಿಲ್ಲವಾದರೆ ಮತ್ತೆ ಹಲವು ಶಾಲೆಗಳಲ್ಲಿ ಮೊಟ್ಟೆ ತಿನ್ನುವ ಮಕ್ಕಳಿಗೂ ಬಾಳೆಹಣ್ಣು ನೀಡಲಾಗುತ್ತಿದೆ. ಇನ್ನು ಕೆಲವು ಶಾಲೆಗಳಲ್ಲಿ ಮೊಟ್ಟೆ ಮತ್ತು ಬಾಳೆಹಣ್ಣಿನ ಬದಲಾಗಿ ಕೇವಲ ಚಿಕ್ಕಿಯನ್ನು ಮಕ್ಕಳಿಗೆ ನೀಡಲಾಗುತ್ತಿದೆ. ಈ ಚಿಕ್ಕಿ ಕೂಡ ಸರಕಾರ ನಿಗದಿಪಡಿಸಿದ ತೂಕಕ್ಕಿಂತ ಕಡಿಮೆ ತೂಕದ ಚಿಕ್ಕ ಗಾತ್ರದ ಚಿಕ್ಕಿಯನ್ನು ನೀಡಲಾಗುತ್ತಿದೆ ಎಂದು ಎಪಿಎಫ್, ಇಲಾಖೆಗೆ ವರದಿ ನೀಡಿದೆ.

ಒಟ್ಟಾರೆ ಇಡೀ ಯೋಜನೆಯ ಅನುಷ್ಠಾನದಲ್ಲಿ ಶಿಕ್ಷಣ ಇಲಾಖೆ ಸಂಪೂರ್ಣ ಎಡವಿರುವುದು ಸ್ಪಷ್ಟವಾಗುತ್ತದೆ. ಮಹತ್ವಾಕಾಂಕ್ಷೆಯ ಯೋಜನೆಯ ನೈಜ ಉದ್ದೇಶವೇ ನಿರರ್ಥಕವಾಗುತ್ತಿದೆಯಲ್ಲದೆ ಮಕ್ಕಳ ಹೆಸರಲ್ಲಿ ಇದರ ಹಣವನ್ನು ಯಾರೋ ಜೇಬಿಗಿಳಿಸುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗುತ್ತಿದೆ. ಯೋಜ­ನೆಯ ಸಮರ್ಪಕ ಅನುಷ್ಠಾನಕ್ಕೆ ತತ್‌ಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಇಲಾಖೆ­ಯನ್ನು ಎಪಿಎಫ್ ಆಗ್ರಹಿಸಿದೆ. ಈ ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡಿ­ರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಯೋಜನೆಯನ್ನು ಸಮರ್ಪಕವಾಗಿ ಅನು­ಷ್ಠಾನಗೊಳಿ­ಸುವ ದೃಷ್ಟಿಯಿಂದ ಆ್ಯಪ್‌ ಅಳವಡಿಕೆ, ಶಾಲೆಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ಮತ್ತಿತರ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನೇನೋ ನೀಡಿದೆ.

ಶಿಕ್ಷಣ ಇಲಾಖೆ ಈ ವಿಷಯದಲ್ಲಿ ಕೇವಲ ಭರವಸೆಗಷ್ಟೇ ಸೀಮಿತವಾಗದೆ ಮಕ್ಕಳಿಗೆ ನೀಡಲಾಗುತ್ತಿರುವ ಪೌಷ್ಟಿಕ ಆಹಾರದಲ್ಲೂ ಅಕ್ರಮ ಎಸಗುವವರ ವಿರುದ್ಧ ಇಲಾಖೆ ನಿಷ್ಠುರ ಕ್ರಮ ಕೈಗೊಳ್ಳಬೇಕು. ಖಾಸಗಿ ಸಂಸ್ಥೆಯ ಪ್ರಾಯೋಜಕತ್ವವನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಶಿಕ್ಷಣ ಇಲಾಖೆ ಎಡವಿದ್ದು, ಇಂತಹ ಎಡವಟ್ಟು­ಗಳಿಂದಲೇ ಖಾಸಗಿ ಸಂಘ, ಸಂಸ್ಥೆಗಳು ಇಲಾಖೆಯೊಂದಿಗೆ ಕೈಜೋಡಿಸಲು ಹಿಂದೇಟು ಹಾಕುತ್ತಿವೆ.

ಇನ್ನಾದರೂ ಶಿಕ್ಷಣ ಇಲಾಖೆ ಇಂತಹ ಅವಾಂತರಗಳು, ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಈಗ ಬೆಳಕಿಗೆ ಬಂದಿರುವ ಅಕ್ರಮದ ಹಿಂದಿರುವ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರಗಿಸುವುದರ ಜತೆಯಲ್ಲಿ ಹಾಲಿ ಯೋಜನೆ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊ­ಳ್ಳುವುದನ್ನು ಖಾತರಿಪಡಿಸುವ ಹೊಣೆಗಾರಿಕೆಯನ್ನು ಇಲಾಖೆ ಸಮರ್ಥವಾಗಿ ನಿಭಾಯಿಸಿದಲ್ಲಿ ಮಾತ್ರವೇ ತನ್ನ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಲು ಸಾಧ್ಯ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.