Charmadi Ghat ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ
Team Udayavani, Nov 9, 2024, 1:23 PM IST
ಮಂಗಳೂರು: ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ ಎಂದು ಸಂಸದರು ಹೇಳಿದ್ದಾರೆ.
ರಾಜ್ಯದ ಪ್ರಮುಖ ಹೆದ್ದಾರಿಯಾದ ಚಾರ್ಮಾಡಿ ಘಾಟ್‌ನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಸುಗಮ ಸರಕು ಸಾಗಾಣೆಯೊಂದಿಗೆ ಈ ಭಾಗದ ವ್ಯಾಪಾರ-ವಹಿವಾಟು ಕೂಡ ವೃದ್ಧಿಸಲಿದೆ. ಆ ಮೂಲಕ, ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲು ಎಂದು ಗುರುತಿಸಿಕೊಂಡಿರುವ ಕರಾವಳಿ ಮತ್ತಷ್ಟು ಪ್ರಗತಿ ಪಥದಲ್ಲಿ ಮುನ್ನಡೆಯಲಿದೆ ಎಂದರು.
ಹೀಗಾಗಿ, ಚಾರ್ಮಾಡಿ ಘಾಟ್ ಹೆದ್ದಾರಿ ದ್ವಿಪಥಗೊಳಿಸಲು 343,74,00,000 ರೂ. ಬಿಡುಗಡೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಇಲಾಖೆ ಅಧಿಕಾರಿಗಳಿಗೆ ಜಿಲ್ಲೆಯ ಜನತೆ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಕ್ಯಾ. ಚೌಟ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ
Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು
Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು
Mangaluru: ಯಾವುದೇ ರಾಜ್ಯಕ್ಕೂ ಕೇಂದ್ರ ಮಲತಾಯಿ ಧೋರಣೆ ಮಾಡಿಲ್ಲ: ನಿರ್ಮಲಾ ಸೀತಾರಾಮನ್
Padil ಹೆದ್ದಾರಿಗೆ ಡಾಮರು, ಜಂಕ್ಷನ್‌ಗೆ ಇಲ್ಲ !
MUST WATCH
ಹೊಸ ಸೇರ್ಪಡೆ
Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು… ಸುನಿಲ್ ಆರೋಪ
ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ
Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ
Arjun Tendulkar: 5 ವಿಕೆಟ್ ಕೆಡವಿದ ಅರ್ಜುನ್ ತೆಂಡುಲ್ಕರ್ ಐಪಿಎಲ್ ಆಯ್ಕೆಗೆ ಸಜ್ಜು
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.