Bengaluru: ವ್ಯಾಪಾರಿ ಮನೆಯಲ್ಲಿ ಕೇಜಿಗಟ್ಟಲೆ ಚಿನ್ನ, ಹಣ ಕದ್ದ ಗಾರ್ಡ್‌!

ಜಾತ್ರೆಗಾಗಿ ಗುಜರಾತ್‌ಗೆ ತೆರಳಿದ್ದ ಚಿನ್ನದ ವ್ಯಾಪಾರಿ ; ಸೋದರಿಯರ ಹಣವನ್ನೂ ಮನೆಯಲ್ಲಿಟ್ಟಿದ್ದ ತಮ್ಮ

Team Udayavani, Nov 9, 2024, 3:51 PM IST

14-bng

ಬೆಂಗಳೂರು: ಚಿನ್ನದ ವ್ಯಾಪಾರಿಯೊಬ್ಬರು ಗುಜರಾತ್‌ಗೆ ಜಾತ್ರೆಗೆ ಹೋದ ವೇಳೆ ಮನೆಯಲ್ಲಿದ್ದ 15.15 ಕೋಟಿ ರೂ. ಮೌಲ್ಯದ ಚಿನ್ನಾಭರಣ, ನಗದನ್ನು ಅದೇ ಮನೆಯಲ್ಲಿದ್ದ ನೇಪಾಳ ಮೂಲದ ಸೆಕ್ಯೂರಿಟಿಗಾರ್ಡ್‌ ದೋಚಿರುವ ಪ್ರಕರಣ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನೇಪಾಳ ಮೂಲದ ನಮ್ರಾಜ್‌ ಆರೋಪಿ. ವಿಜಯನಗರದ ನಿವಾಸಿ ಸುರೇಂದ್ರ ಕುಮಾರ್‌ ಜೈನ್‌ ಎಂಬವರ ಮನೆಯಲ್ಲಿ ಕಳುವಾಗಿದ್ದು, ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಗಡಿ ರಸ್ತೆಯ ವಿದ್ಯಾರಣ್ಯನಗರದಲ್ಲಿ ಸುಮಾರು 30 ವರ್ಷಗಳಿಂದ ಸುರೇಂದ್ರ ಕುಮಾರ್‌ ಜೈನ್‌ ಚಿನ್ನಾಭರಣ ವ್ಯಾಪಾರವನ್ನು ಮಾಡಿಕೊಂಡಿದ್ದರು. ಇವರ ಅಂಗಡಿಯಲ್ಲಿ 7 ಜನ ಹುಡುಗರು ಕೆಲಸ ಮಾಡಿಕೊಂಡಿದ್ದು, ಆ ಪೈಕಿ 6 ಮಂದಿ ತಮ್ಮ ಸ್ವಂತ ಮನೆಗಳಲ್ಲಿ ವಾಸವಾಗಿರುತ್ತಾರೆ. ಇವರ ಅಂಗಡಿ ಯಲ್ಲಿ ಸೆಕ್ಯೂರಿಟಿ ಗಾರ್ಡ್‌ ಕೆಲಸ ಮಾಡಿಕೊಂಡಿದ್ದ ಆರೋಪಿ ನಮ್ರಾಜ್‌ಗೆ ಮನೆ ಇಲ್ಲದ ಕಾರಣ ಸುರೇಂದ್ರ ಕುಮಾರ್‌ ಜೈನ್‌ ತನ್ನ ಮನೆಯ ಪಾರ್ಕಿಂಗ್‌ ಸ್ಥಳದಲ್ಲಿರುವ ಸೆಕ್ಯೂರಿಟಿ ರೂಮ್‌ನಲ್ಲಿ 6 ತಿಂಗಳಿನಿಂದ ನಮ್ರಾಜ್‌ಗೆ ವಾಸ್ತವ್ಯ ಕಲಿಸಿದ್ದ. ಈ ವೇಳೆ ಜೈನ್‌ ಮನೆಯಲ್ಲಿ ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಿದ್ದ. ಸುರೇಂದ್ರ ಕುಮಾರ್‌ ಜೈನ್‌ ಮನೆಯಲ್ಲಿ ಚಿನ್ನಾಭರಣ ಹಾಗೂ ನಗದು ಹಣವನ್ನು ಇಡುವ ವಿಚಾರ ತಿಳಿದುಕೊಂಡಿದ್ದ. ನ.1 ರಂದು ಸುರೇಂದ್ರ ಕುಟುಂಬದ ಜತೆ ಗುಜರಾತ್‌ನ ಗಿರ್ನಾರ್‌ಗೆ ಪ್ರವಾಸ ತೆರಳಿದ್ದರು. ನ.7ರಂದು ಮುಂಜಾನೆ ವಾಪಾಸ್ಸಾದಾಗ ಸುಮಾರು 15.15 ಕೋಟಿ ಮೌಲ್ಯದ ಚಿನ್ನಾಭರಣ, ನಗದು ಕಳುವಾಗಿ ರುವುದು ಕಂಡು ಬಂದಿತ್ತು. ಆತಂಕಗೊಂಡ ಸುರೇಂದ್ರ ಸೆಕ್ಯೂರಿಟಿಗಾರ್ಡ್‌ನನ್ನು ಹುಡುಕಿದಾಗ ಆತ ನಾಪತ್ತೆಯಾಗಿದ್ದ. ಮೊಬೈಲ್‌ ಸ್ವಿಚ್‌ ಆಫ್ ಆಗಿತ್ತು. ನಮ್ರಾಜ್‌ ಕಳವು ಮಾಡಿಕೊಂಡು ಹೋಗಿದ್ದಾನೆ ಎಂದು ಜೈನ್‌ ದೂರಿನಲ್ಲಿ ತಿಳಿಸಿದ್ದಾರೆ.

ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ ಇಟ್ಟಿದ್ದ ವ್ಯಾಪಾರಿ

ಅಂಗಡಿಯಲ್ಲಿ ವ್ಯಾಪಾರ ಮಾಡಿ ತಂದಿಟ್ಟಿದ್ದ 37.80 ಲಕ್ಷ ರೂ., ಮನೆಯಲ್ಲಿ ಇಟ್ಟಿದ್ದ ಉಳಿತಾಯದ ಹಣ 3 ಲಕ್ಷ ರೂ., ನಗದು 40.80 ಲಕ್ಷ ರೂ., ಸುರೇಂದ್ರ ಕುಮಾರ್‌ ಜೈನ್‌ ಪತ್ನಿ ಸಾರಿಕಾ ಜೈನ್‌ ಅವರ ಸುಮಾರು 1,480 ಗ್ರಾಂ ತೂಕದ ಚಿನ್ನಾಭರಣಗಳು, ತಾಯಿ ತಾರಾ ಬಾಯಿ ಅವರ ಸುಮಾರು 465 ಗ್ರಾಂ ಚಿನ್ನಾಭರಣಗಳು, ಪುತ್ರ ಸಾವನ್‌ ಜೈನ್‌ರ ಸುಮಾರು 240 ಗ್ರಾಂ ಚಿನ್ನಾಭರಣ, ಮತ್ತೂಬ್ಬ ಪುತ್ರ ಸಕ್ಷಮ್‌ರ ಸುಮಾರು 220 ಗ್ರಾಂ ಚಿನ್ನ, ಸ್ವಂತ ಚಿನ್ನಾಭರಣ ಸುಮಾರು 430 ಗ್ರಾಂ ಚಿನ್ನ ಕಳುವಾಗಿದೆ.

ಇನ್ನು ಸುರೇಂದ್ರ ಕುಮಾರ್‌ ಜೈನ್‌ ಮನೆಯಲ್ಲಿ ಸೆಕ್ಯೂರಿಟಿ ಗಾರ್ಡ್‌ ನಮ್ರಾಜ್‌ ಇರುವುದರಿಂದ ಇವರ ಐವರು ಅಕ್ಕಂದಿರು ಭದ್ರತೆಯ ದೃಷ್ಟಿಯಿಂದ ಜಾತ್ರೆಗೆ ಹೋಗಿ ಬರುವವರೆಗೂ ತಮ್ಮ 2,790 ಗ್ರಾಂ ಚಿನ್ನಾಭರಣ ಇಟ್ಟುಕೊಳ್ಳುವಂತೆ ಹೇಳಿದ್ದರು. ಇನ್ನು ಅಂಗಡಿಯಲ್ಲಿ ವ್ಯಾಪಾರಕ್ಕೆ ಇಟ್ಟಿದ್ದ ಚಿನ್ನದ ಬಿಸ್ಕೆಟ್‌ಗಳು, ವಜ್ರದ ಆಭರಣಗಳು, ಗಿರವಿ ಇಟ್ಟುಕೊಂಡಿದ್ದ ಚಿನ್ನಾಭರಣಗಳು ಹಾಗೂ ವ್ಯಾಪಾರದ ಹೆಚ್ಚುವರಿ ಚಿನ್ನಾಭರಣಗಳನ್ನು ಊರ ಜಾತ್ರೆಗೆ ಹೋಗಬೇಕಾಗಿದ್ದರಿಂದ ಅಂಗಡಿಯಲ್ಲಿದ್ದರೆ ಸುರಕ್ಷತೆ ಇರುವುದಿಲ್ಲವೆಂದು 12,812 ಗ್ರಾಂಗಳ ಚಿನ್ನಾಭರಣಗಳನ್ನು ಸುರೇಂದ್ರ ಕುಮಾರ್‌ ಮನೆಯಲ್ಲಿ ತಂದು ಇಟ್ಟಿದ್ದರು.

ಟಾಪ್ ನ್ಯೂಸ್

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!

Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!

5

Arrested: ಫಾರೆಸ್ಟ್‌ ಗಾರ್ಡ್‌ ಹುದ್ದೆ ತೊರೆದು ಕಳ್ಳತನಕ್ಕಿಳಿದವ ಸೆರೆ

Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು

Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು

Crime: ಹೆತ್ತ ತಾಯಿಯನ್ನೇ ಕೊಂದ ಮಗ!

Crime: ಹೆತ್ತ ತಾಯಿಯನ್ನೇ ಕೊಂದ ಮಗ!

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.