Hyderabad; ಸಲ್ಮಾನ್ ಖಾನ್ ಚಿತ್ರದ ಚಿತ್ರೀಕರಣ ಸ್ಥಳದಲ್ಲಿ ವ್ಯಾಪಕ ಕಟ್ಟೆಚ್ಚರ
ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ನಿರಾಕರಿಸಿದ ಪೊಲೀಸ್ ಅಧಿಕಾರಿಗಳು
Team Udayavani, Nov 9, 2024, 6:06 PM IST
ಹೈದರಾಬಾದ್ : ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಹೈದರಾಬಾದ್ನ ಸ್ಟಾರ್ ಹೋಟೆಲ್ನಲ್ಲಿ ನಡೆಯುತ್ತಿದ್ದು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಟಾಪ್ ಹೀರೋಗೆ ಬಂದಿರುವ ನಿರಂತರ ಬೆದರಿಕೆಗಳ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯ ನಡುವೆ ನಡೆಸಲಾಗುತ್ತಿದೆ.
ಸಲ್ಮಾನ್ ಖಾನ್ ಅವರು ‘ವೈ ಪ್ಲಸ್’ ವರ್ಗದ ಭದ್ರತೆ ಹೊಂದಿರುವುದರಿಂದ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ಶನಿವಾರ(ನ9) ತಿಳಿಸಿದ್ದು, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ನಿರಾಕರಿಸಿವೆ.‘ಸಿಕಂದರ್’ ಚಿತ್ರದಲ್ಲಿ ‘ರಶ್ಮಿಕಾ ಮಂದಣ್ಣ ಕೂಡ ನಟಿಸುತ್ತಿದ್ದಾರೆ.
ವರದಿಗಳ ಪ್ರಕಾರ, ಸಲ್ಮಾನ್ ಖಾನ್ ಅವರಿಗೆ ಸರಕಾರದ ಭದ್ರತೆ ಜತೆಗೆ ತಮ್ಮದೇ ಆದ ಭದ್ರತೆಯನ್ನೂ ಹೊಂದಿದ್ದಾರೆ. ಈ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆಗಳನ್ನು ಪಡೆದಿದ್ದ ಸಲ್ಮಾನ್ ಅವರಿಗೆ ಮತ್ತೆ ಬೆದರಿಕೆಗಳನ್ನು ಹಾಕಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ಮುಂಬೈನಲ್ಲಿ ತಿಳಿಸಿದ್ದರು. ಗುರುವಾರ ರಾತ್ರಿ ಮುಂಬೈ ಸಂಚಾರ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಬೆದರಿಕೆ ಸಂದೇಶ ಕಳುಹಿಸಿ
5 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದು, ಇದನ್ನು ಬಿಷ್ಣೋಯ್ ಗ್ಯಾಂಗ್ ಪರವಾಗಿ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ಇದಲ್ಲದೆ, ‘ಮೈ ಸಿಕಂದರ್ ಹೂ’ ಹಾಡಿನ ಗೀತರಚನೆಕಾರನಿಗೆ ಬೆದರಿಕೆ ಹಾಕಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಅಧಿಕಾರಿಗಳ ದೂರಿನ ಮೇರೆಗೆ ವರ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ
Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್ ಗಡ್ಕರಿ
Dal Lake: ಶ್ರೀನಗರದಲ್ಲಿ ಏಷ್ಯಾದ ಮೊದಲ ಜಲ ಸಾರಿಗೆ ʼಉಬರ್ ಶಿಕಾರಾʼ ಆರಂಭ
Alappuzha: ಬಸ್ ಗೆ ಡಿಕ್ಕಿ ಹೊಡೆದ ಕಾರು; ಐವರು ವೈದ್ಯಕೀಯ ವಿದ್ಯಾರ್ಥಿಗಳ ಸಾ*ವು
New District: “ಮಹಾ ಕುಂಭಮೇಳ’ ಈಗ ಉತ್ತರಪ್ರದೇಶದ ಹೊಸ ಜಿಲ್ಲೆ!
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.