Toxic: ʼಟಾಕ್ಸಿಕ್ʼ ಶೂಟ್‌ನಲ್ಲಿ ಯಶ್; ಕ್ಯಾಮೆರಾ ಕಂಡು ಮುಖ ಮುಚ್ಚಿಕೊಂಡು ಹೋದ ರಾಕಿಭಾಯ್
Team Udayavani, Nov 10, 2024, 6:44 PM IST
ಬೆಂಗಳೂರು/ ಮುಂಬಯಿ: ಪ್ಯಾನ್ ಇಂಡಿಯಾ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ (Toxic) ಸಿನಿಮಾದ ಚಿತ್ರೀಕರಣ ಆರಂಭಗೊಂಡಿದೆ.
ಅನೌನ್ಸ್ ಆದ ದಿನದಿಂದ ಟಾಕ್ ಆಫ್ ದಿ ಟೌನ್ ಆಗಿರುವ ಗೀತು ಮೋಹನ್ ದಾಸ್ (Geetu Mohandas) ಅವರ ‘ಟಾಕ್ಸಿಕ್ʼನಲ್ಲಿ ಭಾರತದ ಕಲಾವಿದರ ಜತೆಗೆ ವಿದೇಶಿ ಕಲಾವಿದರು, ತಂತ್ರಜ್ಞರು ಕೂಡ ಇದ್ದಾರೆ. ಇತ್ತೀಚೆಗೆ ಹಾಲಿವುಡ್‌ನ ಸಾಹಸ ನಿರ್ದೇಶಕ ಜೆ.ಜೆ. ಪೆರ್ರಿ( JJ Perry) ಮುಂಬೈನಲ್ಲಿ ಟಾಕ್ಸಿಕ್ ಚಿತ್ರ ತಂಡವನ್ನು ಸೇರಿಕೊಂಡಿದ್ದಾರೆ.
ಇದೀಗ ಮುಂಬಯಿನಲ್ಲಿ ಚಿತ್ರೀಕರಣ ಮಾಡುತ್ತಿರುವ ಸಂದರ್ಭದಲ್ಲಿನ ರಾಕಿಂಗ್ ಸ್ಟಾರ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ರಾಕಿಂಗ್ ಸ್ಟಾರ್, ಕಿಯಾರಾ ಅಡ್ವಾಣಿ ಅವರು ಮುಂಬಯಿನ ವೆರ್ಸೋವಾ ಜೆಟ್ಟಿಯಲ್ಲಿ ಶೂಟಿಂಗ್ ಸ್ಪಾಟ್‌ನತ್ತ ಹೋಗುತ್ತಿರುವಾಗ ಪಾಪಾರಾಜಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ.
#Yash at #Versova jetty leaving for #Toxic shoot on island pic.twitter.com/V9xTSuFPXw
— $@M (@SAMTHEBESTEST_) November 10, 2024
ಸಿನಿಮಾಕ್ಕಾಗಿ ಇಟ್ಟಿರುವ ಹೊಸ ಗಡ್ಡದ ಲುಕ್ ಕ್ಯಾಮೆರಾ ಕಣ್ಣಿನಿಂದ ಮುಚ್ಚಿಟ್ಟಿದ್ದಾರೆ. ಬಂದನಾ ಮಾಸ್ಕ್ ನಿಂದ ತನ್ನ ಮುಖವನ್ನು ಮುಚ್ಚಿಕೊಂಡು ಯಶ್ ಹೋಗಿದ್ದಾರೆ. ಇನ್ನೊಂದು ಕಡೆ ಇದೇ ಸ್ಪಾಟ್‌ನಲ್ಲಿ ಕಿಯಾರಾ ಅಡ್ವಾಣಿ ಕೂಡ ಕಾಣಿಸಿಕೊಂಡಿದ್ದಾರೆ.
ಮೂಲಗಳ ಪ್ರಕಾರ ಚಿತ್ರದ ಶೂಟಿಂಗ್ ನಗರದ ದ್ವೀಪವೊಂದರಲ್ಲಿ ನಡೆಯಲಿದೆ ಎನ್ನಲಾಗಿದೆ.
ನಯನತಾರ (Nayanthara) ಜೊತೆಗೆ ಅಕ್ಷಯ್ ಒಬೆರಾಯ್ (Akshay Oberoi), ತೆಲುಗು-ತಮಿಳು ನಟ ತಣಿಕೆಲ್ಲ ಭರಣಿ ಅವರು ಚಿತ್ರತಂಡದ ಜತೆ ಸೇರಿಕೊಂಡಿದ್ದಾರೆ. ಕಿಯಾರಾ ಅಡ್ವಾಣಿ (Kiara Advani) ಹುಮಾ ಖುರೇಷಿ (Human Qureshi) ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರೊಂದಿಗೆ ನವಾಝುದ್ದೀನ್ ಸಿದ್ದಿಕಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಮುಂದಿನ ವರ್ಷ ಸಿನಿಮಾ ರಿಲೀಸ್ ಆಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.