Mangaluru; ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹ*ತ್ಯೆ ಯತ್ನ: ಸ್ಥಳೀಯರಿಂದ ರಕ್ಷಣೆ!
ಸೇತುವೆ ಮೇಲೆ ನಿಂತು ಆತ್ಮಹ*ತ್ಯೆಗೆ ಯತ್ನ...ಸ್ಥಳೀಯರಿಂದ ಸಕಾಲಿಕ ಕಾರ್ಯಾಚರಣೆ
Team Udayavani, Nov 10, 2024, 6:28 PM IST
ಮಂಗಳೂರು: ನಗರದ ಹೊರವಲಯದ ಗುರುಪುರ ಬಳಿ ಪುಟ್ಟ ಮಗುವನ್ನು ಹಿಡಿದುಕೊಂಡಿದ್ದ ವ್ಯಕ್ತಿಯೊಬ್ಬ ಸೇತುವೆಯಿಂದ ಜಿಗಿದು ಆತ್ಮಹ*ತ್ಯೆಗೆ ಮುಂದಾದ ವೇಳೆ ಸ್ಥಳೀಯರು ಸಕಾಲಿಕ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ ಘಟನೆ ರವಿವಾರ(ನ10) ರಂದು ನಡೆದಿದೆ.
ಕಂದಾವರ ಪಡ್ಡಾಯಿ ಪದವಿನ ಸಂದೀಪ್ (34) ಎಂಬಾತ 2 ವರ್ಷದ ಮಗುವನ್ನು ಹಿಡಿದುಕೊಂಡು ಸೇತುವೆ ಮೇಲೆ ನಿಂತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಳ್ಳುತ್ತಿದ್ದ. ಈ ವೇಳೆ ಸ್ಥಳೀಯ ಕೆಳಗೆ ಹಾರಬೇಡ ಎಂದು ಒತ್ತಾಯಿಸಿದ್ದಾರೆ. ಆತ ಯಾರೂ ಹತ್ತಿರ ಬರಬೇಡಿ ಎಂದು ಕೂಗಿ ಕೊಂಡಿದ್ದಾರೆ. ಕೊನೆಗೂ ಸ್ಥಳೀಯರು ಆತನನ್ನು ಹಿಡಿದು ಮಗುವಿನ ರಕ್ಷಣೆ ಮಾಡಿದ್ದಾರೆ.
ಕೌಟುಂಬಿಕ ಕಲಹ ದಿಂದ ನೊಂದು ಆತ್ಮಹತ್ಯೆಗೆ ಮುಂದಾಗಿದ್ದ ಎಂದು ತಿಳಿದು ಬಂದಿದೆ. ಸ್ಥಳೀಯರು ಬುದ್ದಿ ಮಾತು ಹೇಳಿ ಮನೆಗೆ ಕಳುಹಿಸಿದ್ದಾರೆ. ಘಟನೆಯ ದೃಶ್ಯಾವಳಿಗಳ ವಿಡಿಯೋ ಸೆರೆಯಾಗಿದೆ.
ನಿರಂತರ ಜಗಳ ನಡೆಯುತ್ತಿದ್ದ ಕಾರಣದಿಂದ ಸಂದೀಪ್ ವಿರುದ್ಧ ಪತ್ನಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಳು ಎಂದು ತಿಳಿದು ಬಂದಿದೆ.
View this post on Instagram
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.