ICC; ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ ಕಾರ್ಯಕ್ರಮ ರದ್ದು
Team Udayavani, Nov 11, 2024, 6:16 AM IST
ದುಬಾೖ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಆತಿಥ್ಯಕ್ಕೆ ಪಾಕಿಸ್ಥಾನ ಸಕಲ ಸಿದ್ಧತೆಯಲ್ಲಿರುವಾಗಲೇ ಐಸಿಸಿ ಬಲವಾದ ಆಘಾತವೊಂದನ್ನು ನೀಡಿದೆ. ಸೋಮವಾರ ಲಾಹೋರ್‌ನಲ್ಲಿ ನಡೆಯಬೇಕಿದ್ದ ಪಂದ್ಯಾವಳಿಯ ವೇಳಾಪಟ್ಟಿ ಬಿಡುಗಡೆ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.
ಭಾರತ ತಂಡ ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಪಾಕಿಸ್ಥಾನಕ್ಕೆ ತೆರಳದು ಎಂದು ಶನಿವಾರ ಐಸಿಸಿಗೆ ಸೂಚಿಸಿದ ಬಳಿಕ ಈ ಬೆಳವಣಿಗೆ ಸಂಭವಿಸಿದೆ. ವೇಳಾಪಟ್ಟಿಗೆ ಸಂಬಂಧಿಸಿದಂತೆ ಪಿಸಿಬಿ ಮತ್ತು ಬಿಸಿಸಿಐ ನಡುವೆ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯದಿಂದ ಐಸಿಸಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.
“ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ವೇಳಾಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ನಾವು ಆತಿಥೇಯ ದೇಶ ಹಾಗೂ ಇದರಲ್ಲಿ ಪಾಲ್ಗೊಳ್ಳುತ್ತಿರುವ ದೇಶಗಳೊಂದಿಗೆ ಚರ್ಚಿಸುತ್ತಿದ್ದೇವೆ. ಒಮ್ಮೆ ಖಚಿತಗೊಂಡ ಬಳಿಕ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸುತ್ತೇವೆ’ ಎಂದು ಐಸಿಸಿ ಮೂಲವೊಂದು ತಿಳಿಸಿದೆ.
ಇಸ್ಲಾಮಾಬಾದ್: ಮುಂದಿನ ವರ್ಷ ಪಾಕಿಸ್ಥಾನದಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್‌ನಲ್ಲಿ ಪಾಲ್ಗೊಳ್ಳಲು ಭಾರತ ತೆರಳುವುದಿಲ್ಲ ಎಂಬುದು ದೊಡ್ಡ ಸುದ್ದಿಯಾಗಿದೆ. ಇದರ ಬೆನ್ನಲ್ಲೇ ಪಿಸಿಬಿ ಇದೇ ವಿಚಾರವಾಗಿ ಅಂತಾರಾಷ್ಟ್ರೀಯ ಕ್ರೀಡಾ ನ್ಯಾಯಾಲಯದ ಮೆಟ್ಟಿಲೇರಲಿದೆ ಎಂದು ವರದಿಯಾಗಿದೆ. ಒಂದು ವೇಳೆ ಇದು ನಿಜವೇ ಆದರೆ, ಕ್ರೀಡಾ ನ್ಯಾಯಾಲಯದ ತೀರ್ಪು ಭಾರೀ ಕುತೂಹಲ ಕೆರಳಿಸಲಿದೆ. ತೀರ್ಪು ಯಾವುದೇ ದೇಶದ ಪರವಾಗಿ ಬಂದರೂ ದೊಡ್ಡ ವಿವಾದ ಸೃಷ್ಟಿಯಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.