Mangaluru: ಪಿಲಿಕುಳ ಕಂಬಳ ಮುಂದೂಡಿಕೆ ಸಾಧ್ಯತೆ
ಮೂಡುಶೆಡ್ಡೆ ಪಂ. ಚುನಾವಣೆ
Team Udayavani, Nov 11, 2024, 6:44 AM IST
ಮಂಗಳೂರು: ಜಿಲ್ಲಾಡಳಿತ ವತಿಯಿಂದ ಆಯೋಜಿಸಲು ಉದ್ದೇಶಿಸಲಾಗಿರುವ ಬಹು ನಿರೀಕ್ಷಿತ ಪಿಲಿಕುಳ “ನೇತ್ರಾವತಿ- ಫಲ್ಗುಣಿ’ ಜೋಡುಕರೆ ಕಂಬಳ ಮೂಡುಶೆಡ್ಡೆ ಪಂಚಾಯತ್ ಚುನಾವಣೆ ಕಾರಣಕ್ಕೆ ಮುಂದೂಡಿಕೆಯಾಗುವ ಬಹುತೇಕ ಸಾಧ್ಯತೆಯಿದೆ.
ಹತ್ತು ವರ್ಷಗಳ ಬಳಿಕ ಇದೀಗ ನ.17 ಮತ್ತು 18ರಂದು ಪಿಲಿಕುಳದ ಜೋಡುಕರೆಯಲ್ಲಿ ಕಂಬಳ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಈ ನಡುವೆ ಪಿಲಿಕುಳ ವ್ಯಾಪ್ತಿಯ ಮೂಡುಶೆಡ್ಡೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸದಸ್ಯ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.
ನ.23ರಂದು ಚುನಾವಣೆ ನಡೆಯಲಿದ್ದು, ಇದರಿಂದಾಗಿ ಕಂಬಳ ಆಯೋಜಿಸಿದರೆ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ.ಆದ್ದರಿಂದ ಈ ಬಗ್ಗೆ ನ.11ರಂದು ಜಿಲ್ಲಾಡಳಿತ, ಕಂಬಳ ಸಮಿತಿಯವರ ಸಭೆ ನಡೆಯಲಿದ್ದು, ಇದರಲ್ಲಿ ತೀರ್ಮಾನವಾಗುವ ಸಾಧ್ಯತೆಯಿದೆ. ಒಂದು ವೇಳೆ ಕಂಬಳ ಮುಂದೂಡಿಕೆಯಾದರೆ ನ.17ರಂದು ಪೂರ್ವಭಾವಿ ಕುದಿ ಕಂಬಳ ಆಯೋಜಿಸುವ ಬಗ್ಗೆಯೂ ಚಿಂತನೆ ನಡೆದಿದೆ. ಕಂಬಳದ ಮುಂದಿನ ದಿನಾಂಕವೂ ಅಂತಿಮಪಡಿಸುವ ಸಾಧ್ಯತೆಯೂ ಇದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ‘ಉದಯವಾಣಿ’ ಜತೆ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ| ಸಂತೋಷ್ ಕುಮಾರ್ ಅವರು ಪಂಚಾಯತ್ ಚುನಾವಣೆ ಹಿನ್ನೆಲೆ ಯಲ್ಲಿ ಪಿಲಿಕುಳದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಕಂಬಳ ಮುಂದೂಡಬೇಕಾದ ಅನಿವಾರ್ಯತೆ ಇದೆ. ಶಾಸಕರು, ಕಂಬಳ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳ ಜತೆ ಚರ್ಚಿಸಿ, ಮುಂದಿನ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.