Waqf Issue: ವಕ್ಫ್ ವಿರುದ್ಧ ಹಿಂದೂಗಳು ಒಗ್ಗೂಡಲಿ: ಪ್ರಮೋದ್ ಮುತಾಲಿಕ್
Team Udayavani, Nov 11, 2024, 2:37 AM IST
ಚಿಕ್ಕಮಗಳೂರು: ಕಾಂಗ್ರೆಸ್ ಅಭಯ ಹಸ್ತದಿಂದ ವಕ್ಫ್ ಎಂಬ ಭೂತ ಭಯಾನಕವಾಗಿ ಹರಡುತ್ತಿದೆ. ಈ ಬಗ್ಗೆ ಹಿಂದೂಗಳು ಒಗ್ಗಟ್ಟಾಗಬೇಕು. ಎಚ್ಚರ ವಹಿಸಬೇಕು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ನಗರದಲ್ಲಿ ಭಾನುವಾರ ಶ್ರೀರಾಮಸೇನೆ 21ನೇ ವರ್ಷದ ದತ್ತಮಾಲಾ ಅಭಿಯಾನ ನಿಮಿತ್ತ ಆಯೋಜಿಸಿದ್ದ ಧಾರ್ಮಿಕ ಸಭೆಯಲ್ಲಿ ಮಾತನಾಡಿ ಇಲ್ಲದಿದ್ದರೆ ಮುಂದೊಂದು ದಿನ ಹಿಂದೂ ರಾಷ್ಟ್ರ ಇಸ್ಲಾಂ ರಾಷ್ಟ್ರವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು. ರೈತರ ಜಮೀನು ಪಹಣಿಯಲ್ಲಿ ವಕ್ಫ್ ಬೋರ್ಡ್ ಆಸ್ತಿ ಎಂದು ನಮೂದಾಗಿದೆ. ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೊಟೀಸ್ ಹಿಂಪಡೆಯುವುದಾಗಿ ಮತ್ತು ದಾಖಲೆ ತಿದ್ದುಪಡಿ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಆ ಮೂಲಕ ರೈತರ ಜಮೀನನ್ನು ವಕ್ಫ್ ಬೋರ್ಡ್ ಕಬಳಿಸಲು ಮುಂದಾಗಿರುವುದು ಸತ್ಯ ಎಂದು ಮುಖ್ಯಮಂತ್ರಿ ಒಪ್ಪಿಕೊಂಡಿದ್ದಾರೆ ಎಂದರು.
ರಾಜ್ಯ ಸರ್ಕಾರ ರೈತರಿಗೆ ನೋಟಿಸ್ ನೀಡುವುದಲ್ಲ. ಬದಲಾಗಿ ಮಲ್ಲಿಕಾರ್ಜುನ ಖರ್ಗೆ, ದಿ|ಧರ್ಮಸಿಂಗ್ ಅವರ ಪುತ್ರ, ಶಾಸಕ ಸಿ.ಎಂ.ಇಬ್ರಾಹಿಂ, ರೋಷನ್ ಬೇಗ್, ಹ್ಯಾರಿಸ್ ಸೇರಿದಂತೆ ಅನೇಕರು ವಕ್ಫ್ ಬೋರ್ಡ್ ಆಸ್ತಿ ಹೊಡೆದಿದ್ದಾರೆ. ರಾಜ್ಯ ಸರ್ಕಾರ ಅವರಿಗೆ ಏಕೆ ನೊಟೀಸ್ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಅವರಿಗೆ ನೊಟೀಸ್ ನೀಡಲಿ ಎಂದು ಸವಾಲು ಹಾಕಿದರು.
ಸಚಿವ ಜಮೀರ್ ಅಹಮದ್ ಅವರನ್ನು ಔರಂಗಜೇಬ್‌ಗ ಹೋಲಿಸಿದ ಮುತಾಲಿಕ್, ಔರಂಗಜೇಬ್ ಶಿವಾಜಿ ಕಾಲಘಟ್ಟದಲ್ಲಿ ನಾಶವಾಗಿದ್ದನ್ನು ಮರೆಯಬಾರದು. ಹಿಂದೂ ಸಮಾಜ ಜೀವಂತವಾಗಿದೆ. ಜಮೀರ್ ಅಹಮದ್ ಪ್ರತಿನಿಧಿಸುವ ಚಾಮರಾಜಪೇಟೆಯಲ್ಲಿ 25 ಸಾವಿರಕ್ಕೂ ಹೆಚ್ಚು ಬಾಂಗ್ಲಾದೇಶಿ ಮುಸ್ಲಿಮರಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.