Fraud: ಶ್ಯೂರಿಟಿ ರಹಿತ ಸಾಲ; 1500 ಮಹಿಳೆಯರಿಗೆ ವಂಚನೆ


Team Udayavani, Nov 11, 2024, 10:52 AM IST

5

ಬೆಂಗಳೂರು: ಶ್ರೀಕಾರ್‌ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ಲಿಮಿಟೆಡ್‌ನಿಂದ ಯಾವುದೇ ಶ್ಯೂರಿಟಿ ಇಲ್ಲದೇ ಸಾಲ ಕೊಡಿಸುವುದಾಗಿ ಧರ್ಮಸ್ಥಳ ಸಂಘದ ಮುಖ್ಯಸ್ಥೆ ಸೇರಿ ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ನಂಬಿಸಿ ಹಣ ಪಡೆದು ವಂಚಿಸಿದ ತಾಯಿ-ಮಗಳು ಸೇರಿ ನಾಲ್ವರ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಂಗೇರಿ ನಿವಾಸಿ ಶ್ವೇತಾ ಪಾಂಡ ಎಂಬವರು ನೀಡಿದ ದೂರಿನ ಮೇರೆಗೆ ಲೋಕ ಜನ ಶಕ್ತಿ ಪಕ್ಷದ ರೇಷ್ಮಾ ಬಾನು, ಅವರ ಪುತ್ರಿ ತೌಸಿಯಾ ಅಂಜುಂ ಮತ್ತು ಶ್ರೀಕಾರ್‌ ಸೊಸೈಟಿ ನಿರ್ದೇಶಕ ಆನಂದ್‌ ಹಾಗೂ ಇತರರ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಹೈಗ್ರೌಂಡ್ಸ್‌ ಠಾಣೆ ಪೊಲೀಸರು, ರೇಷ್ಮಾಬಾನುಳನ್ನು ವಶಕ್ಕೆ  ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜತೆಗೆ ಆಕೆಯ ಪುತ್ರಿ ಸೇರಿ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ದೂರುದಾರ ಮಹಿಳೆ ಸುಮಾರು ವರ್ಷಗಳಿಂದ ಧರ್ಮಸ್ಥಳ ಸಂಘದ ಮುಖ್ಯಸ್ಥೆಯಾಗಿದ್ದು, ಈ ಮಧ್ಯೆ ನಾಲ್ಕು ತಿಂಗಳ ಹಿಂದೆ ಪರಿಚಯಸ್ಥರ ಮೂಲಕ ಕ್ವೀನ್ಸ್‌ ರಸ್ತೆಯಲ್ಲಿರುವ ಲೋಕಜನ ಶಕ್ತಿ ಪಕ್ಷದ ಕಚೇರಿಗೆ ಭೇಟಿ ನೀಡಿದ್ದರು. ಆಗ ರೇಷ್ಮಾ ಬಾನು, ಯಾವುದೇ ಶ್ಯೂರಿಟಿ ಇಲ್ಲದೇ ಶ್ರೀಕಾರ್‌ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ಲಿಮಿಟೆಡ್‌ನಿಂದ 50 ಸಾವಿರ ರೂ. ಸಾಲ ಕೊಡಿಸುತ್ತೇವೆ ಎಂದು ನಂಬಿಸಿದ್ದಾಳೆ. ಬಳಿಕ ಆಕೆಯ ಪುತ್ರಿ ತೌಸಿಯಾ ಅಂಜುಂ, 2500 ರೂ. ಪಾವತಿಸಿ ಬ್ಯಾಂಕ್‌ ಖಾತೆ ತೆರೆಯಬೇಕು ಎಂದಿದ್ದಾರೆ. ಅದರಂತೆ ದೂರುದಾರೆ ಸೊಸೈಟಿಯಲ್ಲಿ ಬ್ಯಾಂಕ್‌ ಖಾತೆ ತೆರೆದಿದ್ದು, ಬಳಿಕ ತಮ್ಮ ಧರ್ಮಸ್ಥಳ ಸಂಘದ 72 ಮಂದಿ ಮಹಿಳೆಯರಿಗೂ ವಿಷಯ ತಿಳಿಸಿದ್ದಾರೆ. ಆನಂತರ ಎಲ್ಲಾ ಮಹಿಳೆಯರು ಆರೋಪಿಗಳ ಸೂಚನೆಯಂತೆ ತಲಾ 2500 ರೂ. ಅನ್ನು ನಗದು ಮತ್ತು ಫೋನ್‌ ಪೇ ಮೂಲಕ ಹಣ ಪಡೆದುಕೊಂಡಿದ್ದಾರೆ. ನಂತರ ಕೆಲ ದಾಖಲೆಗಳನ್ನು ಪಡೆದುಕೊಂಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಅಲ್ಲದೆ, ದೂರುದಾರ ಮಹಿಳೆಯ ಸ್ನೇಹಿತರಾದ ತರಲುಮ್‌ ಸುಲ್ತಾನ್‌ ಹಾಗೂ ಹನಿಯಾ ಎಂಬವರ ಮೂಲಕ 24 ಮಹಿಳೆಯರಿಂದ ತಲಾ 3000 ರೂ. ನಂತೆ 72 ಸಾವಿರ ರೂ. ಪಡೆದುಕೊಂಡಿದ್ದಾರೆ. ಬಳಿಕ ರಿಜ್ವಾನಾ ಎಂಬವರ ಮೂಲಕ 40 ಮಹಿಳೆಯರಿಂದ ತಲಾ 5 ಸಾವಿರ ರೂ. ನಂತೆ 42 ಸಾವಿರ ರೂ. ಪಡೆದುಕೊಂಡಿದ್ದಾರೆ.

ಅಲ್ಲದೆ, ರೇಷ್ಮಾ ಬಾನು ಮತ್ತು ಪುತ್ರಿ ತೌಸಿಯಾ ಅಂಜುಂ 1.58 ಲಕ್ಷ ರೂ. ನಗದು ಪಡೆದುಕೊಂಡಿದ್ದಾರೆ. ಆದರೆ, 15 ದಿನಗಳಾದರೂ ಸಾಲ ಕೊಡಿಸಿಲ್ಲ. ಈ ಬಗ್ಗೆ ಕೇಳಿದಾಗ ಸರಿಯಾಗಿ ಸ್ಪಂದಿಸಲಿಲ್ಲ. ಬಳಿಕ ಎಚ್‌ವಿಎಸ್‌ ಕೋರ್ಟ್‌ ಕಟ್ಟಡದ 3ನೇ ಮಹಡಿಗೆ ಕಚೇರಿ ಸ್ಥಳಾಂತರ ಮಾಡಿರುವ ವಿಚಾರ ತಿಳಿದು ನ.9ರಂದು ಅಲ್ಲಿಗೆ ಹೋದಾಗಲೂ ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ. ಜತೆಗೆ ಯಾವುದೇ ಸಾಲ ಕೊಡಿಸುವುದಿಲ್ಲ  ಎಂದು ಏರು ಧ್ವನಿಯಲ್ಲಿ ಬೆದರಿಕೆ ಹಾಕಿದ್ದಾರೆ.

ಆಗ ಕೂಡಲೇ ದೂರುದಾರ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಇತರೆ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿದ್ದ ರೇಷ್ಮಾಬಾನುಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಲ ಕೊಡಿಸುವುದಾಗಿ ಸಾವಿರಾರು ಮಹಿಳೆಯರಿಂದ 4.52 ಲಕ್ಷ ರೂ. ವಂಚಿಸಿದ ರೇಷ್ಮಾಬಾನು ಮತ್ತು ಆಕೆಯ ಪುತ್ರಿ ತೌಸಿಯಾ ಅಂಜುಂ ಹಾಗೂ ಶ್ರೀಕಾರ್‌ ಸೊಸೈಟಿಯ ನಿರ್ದೇಶಕ ಆನಂದ್‌ ಹಾಗೂ ಇತರರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ದೂರು ನೀಡಲಾಗಿದೆ ಎಂದು ಪೊಲೀಸರು ಹೇಳಿದರು.

ವಂಚಿಸಿದ ಹಣ ಬ್ಯಾಂಕ್‌ನಲ್ಲಿ ಡೆಪಾಸಿಟ್‌:

ಪ್ರಕರಣದಲ್ಲಿ ಕಿಂಗ್‌ಪಿನ್‌ ರೇಷ್ಮಾಬಾನುಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಅಂದಾಜು ಒಂದೂವರೆ ಸಾವಿರಕ್ಕೂ ಅಧಿಕ ಮಂದಿಗೆ ವಂಚಿಸಿದ್ದಾರೆ ಎಂಬುದುಗೊತ್ತಾಗಿದೆ. ಇನ್ನು ಆರೋಪಿಗಳು ಸಾರ್ವಜನಿಕರಿಂದ ಪಡೆದುಕೊಂಡ ಲಕ್ಷಾಂತರ ರೂ. ಅನ್ನು ಬ್ಯಾಂಕ್‌ನಲ್ಲಿ ಡೆಪಾಸಿಟ್‌ ಇರಿಸಿದ್ದಾರೆ ಎಂಬುದು ಗೊತ್ತಾಗಿದೆ. ಇತರೆ ಮೂವರು ಆರೋಪಿಗಳನ್ನು ಪತ್ತೆ ಹಚ್ಚಿ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.