BGT; ಪರ್ತ್ ಪಂದ್ಯಕ್ಕೆ ರೋಹಿತ್ ಅಲಭ್ಯ: ಯಾರು ಕ್ಯಾಪ್ಟನ್? ಯಾರು ಓಪನರ್?: ಕೋಚ್ ಉತ್ತರ
Team Udayavani, Nov 11, 2024, 12:57 PM IST
ಮುಂಬೈ: ಭಾರತ ಪುರುಷರ ಕ್ರಿಕೆಟ್ ತಂಡವು ಇನ್ನು ಕೆಲವೇ ದಿನಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಆಸೀಸ್ ನೆಲದಲ್ಲಿ ಎದುರಿಸಲಿದೆ. ನವೆಂಬರ್ 20ರಿಂದ ಪರ್ತ್ ನಲ್ಲಿ ಬಹುನಿರೀಕ್ಷಿತ ಬಾರ್ಡರ್-ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆರಂಭವಾಗಲಿದೆ. ಐದು ಪಂದ್ಯಗಳ ಸರಣಿಯ ಮೊದಲ ಪಂದ್ಯವು ಪರ್ತ್ ನಲ್ಲಿ ನಡೆಯಲಿದೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಮೊದಲ ಮುಖಾಮುಖಿಯಲ್ಲಿ ಆಡುವುದು ಅನುಮಾನ ಎನ್ನಲಾಗಿದೆ. ಅವರು 2ನೇ ಪಂದ್ಯದಿಂದ ತಂಡವನ್ನು ಕೂಡಿಕೊಳ್ಳಲಿದ್ದಾರೆಂದು ಮೂಲಗಳು ಹೇಳಿವೆ. ರೋಹಿತ್ -ರಿತಿಕಾ ಸಜ್ದೇ ದಂಪತಿ ನವೆಂಬರ್ 3ನೇ ವಾರದಲ್ಲಿ 2ನೇ ಮಗು ಜನಿಸುವ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಆದ್ದರಿಂದ ಪರ್ತ್ ನಲ್ಲಿ ನ.22ರಿಂದ ಆರಂಭವಾಗುವ 1ನೇ ಟೆಸ್ಟ್‌ನಲ್ಲಿ ಅವರು ಆಡುವುದಿಲ್ಲ. 2ನೇ ಟೆಸ್ಟ್ ವೇಳೆಗೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರೆಂದು ಹೇಳಲಾಗಿದೆ.
ಈ ಬಗ್ಗೆ ಸೋಮವಾರ (ನ.11) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೋಚ್ ಗೌತಮ್ ಗಂಭೀರ್ ಅವರು ರೋಹಿತ್ ಅಲಭ್ಯತೆಯ ಬಗ್ಗೆ ಸ್ಪಷ್ಟತೆ ನೀಡಿಲ್ಲ. “ಒಂದು ವೇಳೆ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಆಡದಿದ್ದರೆ ಈಗ ಉಪ ನಾಯಕರಾಗಿ ಇರುವ ಜಸ್ಪ್ರೀತ್ ಬುಮ್ರಾ ಅವರು ತಂಡವನ್ನು ಮುನ್ನಡೆಸಲಿದ್ದಾರೆ” ಎಂದಿದ್ದಾರೆ.
“ಈ ಸಮಯದಲ್ಲಿ, ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ. ಆದರೆ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ನಾವು ನಿಮಗೆ ತಿಳಿಸುತ್ತೇವೆ. ಅವರು ಲಭ್ಯವಾಗಲಿದ್ದಾರೆ ಎಂದು ಭಾವಿಸುತ್ತೇವೆ, ಆದರೆ ಸರಣಿಯ ಆರಂಭದಲ್ಲಿ ನಾವು ಎಲ್ಲವನ್ನೂ ತಿಳಿದುಕೊಳ್ಳಲಿದ್ದೇವೆ” ಎಂದು ಗಂಭೀರ್ ಹೇಳಿದರು.
ಒಂದು ವೇಳೆ ರೋಹಿತ್ ಅಲಭ್ಯರಾದರೆ ಮೊದಲ ಪಂದ್ಯದಲ್ಲಿ ಯಾರು ಆರಂಭಿಕರಾಗಿ ಆಡಲಿದ್ದಾರೆ ಎನ್ನುವ ಬಗ್ಗೆಯೂ ಖಚಿತತೆ ಸಿಕ್ಕಿಲ್ಲ. “ನಿಸ್ಸಂಶಯವಾಗಿ ಅಭಿಮನ್ಯು ಈಶ್ವರನ್ ಮತ್ತು ಕೆಎಲ್ ರಾಹುಲ್ ಇದ್ದಾರೆ. ಆದ್ದರಿಂದ ರೋಹಿತ್ ಲಭ್ಯವಿಲ್ಲದಿದ್ದರೆ ನಾವು ಮೊದಲ ಟೆಸ್ಟ್ ಪಂದ್ಯದ ಸಮಯದಲ್ಲಿ ನಿರ್ಧಾರ ಮಾಡುತ್ತೇವೆ” ಎಂದು ಗಂಭೀರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
INDvsSA: ಭುವನೇಶ್ವರ್ ಕುಮಾರ್ ರ ಟಿ20ಐ ದಾಖಲೆ ಮುರಿದ ವೇಗಿ ಅರ್ಶದೀಪ್ ಸಿಂಗ್
Arjun Tendulkar: 5 ವಿಕೆಟ್ ಕೆಡವಿದ ಅರ್ಜುನ್ ತೆಂಡುಲ್ಕರ್ ಐಪಿಎಲ್ ಆಯ್ಕೆಗೆ ಸಜ್ಜು
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
MUST WATCH
ಹೊಸ ಸೇರ್ಪಡೆ
Kaup ತಾಲೂಕಿನಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಬೆಳೆ ಕಟಾವು
Priyank ಆಕ್ರೋಶ: ರಜಾಕಾರರ ದಾಳಿ & ಖರ್ಗೆ ಕುಟುಂಬದ ದುರಂತ, ಸಿಎಂ ಯೋಗಿ ಮಾತಿನ ಮರ್ಮವೇನು?
Kundapura: ಎಂಟು ಗಂಟೆ ಕಾಲ ನಡೆದ ಕುಂದಾಪುರ ಪುರಸಭೆ!
ಎಡ ಕಣ್ಣಿನ ಬದಲು ಬಲ ಕಣ್ಣಿಗೆ ಶಸ್ತ್ರಚಿಕಿತ್ಸೆ… ಮನೆಗೆ ಬಂದಾಗಲೇ ಗೊತ್ತು ವೈದ್ಯರ ಯಡವಟ್ಟು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.