Karkala: ಪರಶುರಾಮ ಥೀಮ್ ಪಾರ್ಕ್ ಪ್ರಕರಣ; ಶಿಲ್ಪಿ ಕೃಷ್ಣನಾಯ್ಕ 6 ದಿನ ಪೊಲೀಸ್ ಕಸ್ಟಡಿಗೆ
Team Udayavani, Nov 11, 2024, 3:09 PM IST
ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ ಅವರನ್ನು ಕೇರಳದಲ್ಲಿ ಬಂಧಿಸಿದ್ದ ಪೊಲೀಸರು ಸೋಮವಾರ (ನ.11ರಂದು) ಕಾರ್ಕಳ ತಾಲೂಕು ನ್ಯಾಯಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಆರೋಪಿ ಕೃಷ್ಣ ನಾಯ್ಕನಿಗೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟ್ ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ್ದು, ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ತಿರಸ್ಕರಿಸಿ ಆದೇಶ ನೀಡಿತ್ತು. ಅನಂತರ ಪೊಲೀಸರು ಪತ್ತೆ ಕಾರ್ಯ ತೀವ್ರಗೊಳಿಸಿ ಹುಡುಕಾಟ ನಡೆಸಿದ್ದರು. ಕೇರಳದ ಕ್ಯಾಲಿಕಟ್ ನಲ್ಲಿ ತಲೆಮರಸಿಕೊಂಡಿದ್ದ ಕೃಷ್ಣ ನಾಯ್ಕ್ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದರು.
ಕೃಷ್ಣ ನಾಯ್ಕ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ಅನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ಆರೋಪಿಸಿ ನಲ್ಲೂರಿನ ಕೃಷ್ಣ ಶೆಟ್ಟಿ ಅವರು ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.