Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
Team Udayavani, Nov 11, 2024, 3:22 PM IST
ಬೀದರ್: ಜಮೀನುಗಳಲ್ಲಿ ವಕ್ಫ್ ಮಂಡಳಿ ನಮೂದಾಗಿರುವುದನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಸೋಮವಾರ ಜಿಲ್ಲಾ ರೈತ ಸಂಘ ಮತ್ತು ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಠಾಧೀಶರು ಮತ್ತು ವಿವಿಧ ಹಿಂದುಪರ ಸಂಘಟನೆಗಳು ಮುಖಂಡರು ಭಾಗವಹಿಸಿ ಬೆಂಬಲ ಸೂಚಿಸಿದರು.
ನಗರದ ಗಣೇಶ ನೈದಾನದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಕರಿಯಪ್ಪ ವೃತ್ತ, ಅಂಬೇಡ್ಕರ ವೃತ್ತ, ಭಗತಸಿಂಗ್ ಮೂಲಕ ರ್ಯಾಲಿ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಕೊನೆಗೊಳಿಸಿದರು. ನಂತರ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತದ ಅಧಿಕಾರಿಗೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ರೈತ ಮತ್ತು ಬಿಜೆಪಿ ಮುಖಂಡರು, ರೈತರು ತಲತಲಾಂತರಗಳಿಂದ ಉಳಿಮೆ ಮಾಡಿಕೊಂಡು ಬಂದಿರುವ ಜಮೀನುಗಳಲ್ಲಿ ರಾತ್ರೋರಾತ್ರಿ ಪಹಣಿಗಳಲ್ಲಿ ವಕ್ಫ್ ಮಂಡಳಿ ಹೆಸರು ನಮೂದಿಸಿ ಕಬಳಿಸುವ ಹುನ್ನಾರ ನಡೆಯುತ್ತಿದೆ. ಕೂಡಲೇ ಪಹಣಿಯಲ್ಲಿವಕ್ಫ್ ಮಂಡಳಿ ಹೆಸರು ಕೈಬಿಟ್ಟು ರೈತರ ಮೇಲಾಗುತ್ತಿರುವ ಶೋಷಣೆಯನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.