Ragini Prajwal: ಶ್ಯಾನುಭೋಗರ ಮಗಳ ಮೇಲೆ ರಾಗಿಣಿ ನಿರೀಕ್ಷೆ
Team Udayavani, Nov 11, 2024, 3:35 PM IST
ರಾಗಿಣಿ ಪ್ರಜ್ವಲ್ ನಾಯಕಿಯಾಗಿ ನಟಿಸಿರುವ “ಶ್ಯಾನುಭೋಗರ ಮಗಳು’ ಚಿತ್ರದ ಟ್ರೇಲರ್ ಹಾಗೂ ಟೈಟಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಭಾಗ್ಯ ಕೃಷ್ಣಮೂರ್ತಿ ಅವರು ಬರೆದ ಇದೇ ಹೆಸರಿನ ಕಾದಂಬರಿಯನ್ನು ಆಧರಿಸಿ ಈ ಚಿತ್ರವನ್ನು ಕೋಡ್ಲು ರಾಮಕೃಷ್ಣ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ದೊರೆತಿದ್ದು, ಚಿತ್ರಬಿಡುಗಡೆಗೆ ಸಿದ್ಧವಾಗಿದೆ.
ಕಾದಂಬರಿಗಾರ್ತಿ ಭಾಗ್ಯ ಕೃಷ್ಣಮೂರ್ತಿ ಮಾತನಾಡಿ, ನಾನೊಬ್ಬ ಪತ್ರಕರ್ತೆ. 32 ಕಾದಂಬರಿಗಳನ್ನು ಬರೆದಿದ್ದೇನೆ, ಅದರಲ್ಲಿ ಅಭಿನೇತ್ರಿ ಸಿನಿಮಾ ಆಗಿದೆ. 2004ರಲ್ಲಿ ನಾನು ಬರೆದಿದ್ದ ಈ ಕಾದಂಬರಿ ತರಂಗ ವಾರಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿತ್ತು. ಇದೊಂದು ಕಾಲ್ಪನಿಕ ಕಥೆಯಾಗಿದ್ದು, ಕೆಲವು ಘಟನೆಗಳು ನೈಜವಾಗಿಯೇ ಇರುವಂತೆ ಕಂಡಿರುವುದು ಆಶ್ಚರ್ಯ ಮೂಡಿಸಿದೆ ಎಂದರು.
ಶ್ಯಾನುಭೋಗರ ಮಗಳು ಶರಾವತಿಯ ಪಾತ್ರ ನಿರ್ವಹಿಸಿರುವ ರಾಗಿಣಿ ಪ್ರಜ್ವಲ್ ಮಾತನಾಡುತ್ತಾ, “ತುಂಬಾ ದಿನಗಳ ಗ್ಯಾಪ್ ನಂತರ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನಾನು ಮೂಲತಃ ಕ್ಲಾಸಿಕಲ್ ಡ್ಯಾನ್ಸರ್. ಈ ಚಿತ್ರದಲ್ಲಿ ಡಬ್ಬಿಂಗ್ ಕೂಡ ಮಾಡಿದ್ದೇನೆ. ದು:ಖದ ಸನ್ನಿವೇಶಗಳಲ್ಲಿ ಗ್ಲಿಸರಿನ್ ಉಪಯೋಗಿಸದೆ ಅಭಿನಯಿಸಿದ್ದೇನೆ. ಇಷ್ಟಪಟ್ಟು ಈ ಚಿತ್ರ ಮಾಡಿದ್ದೇವೆ ಎಂದು ಹೇಳಿದರು.
ನಿರ್ದೇಶಕ ಕೋಡ್ಲು ರಾಮಕೃಷ್ಣ ಮಾತನಾಡಿ, ಈ ಸಿನಿಮಾ ಪ್ರಾರಂಭವಾಗಿದ್ದೇ ಆಕಸ್ಮಿಕ. ಭಾಗ್ಯ ಅವರು ನನಗೆ 35 ವರ್ಷಗಳ ಸ್ನೇಹಿತೆ. ನನ್ನ 32 ಸಿನಿಮಾಗಳಲ್ಲಿ 14 ಕಾದಂಬರಿ ಆಧಾರಿತ ಚಿತ್ರಗಳೇ ಎನ್ನುವುದು ವಿಶೇಷ. 18ನೇ ಶತಮಾನದಲ್ಲಿ ನಡೆಯುವ ಕಥೆಯಿದು ಎಂದರು.
ಸಿ.ಎಂ. ನಾರಾಯಣ್ ಅವರು ನಿರ್ಮಿಸಿರುವ ಈ ಚಿತ್ರಕ್ಕೆ ಜೈಆನಂದ್ ಅವರ ಛಾಯಾಗ್ರಹಣವಿದೆ. ಚಿತ್ರದಉಳಿದ ಪಾತ್ರಗಳಲ್ಲಿ ನಿರಂಜನ್ ಶೆಟ್ಟಿ, ರಮೇಶ್ ಭಟ್, ಸುಧಾ ಬೆಳವಾಡಿ, ವಾಣಿಶ್ರೀ, ಪದ್ಮಾ ವಾಸಂತಿ, ಶ್ರೀನಿವಾಸಮೂರ್ತಿ, ಟಿಪ್ಪು ಸುಲ್ತಾನ್ ಪಾತ್ರದಲ್ಲಿ ನಟ ಕಿಶೋರ್ ಅವರು ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ShivaRajkumar: ʼಘೋಸ್ಟ್ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್ ರಿವೀಲ್
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ
Thalapathy69: ಕಾಲಿವುಡ್ ಸ್ಟಾರ್ ದಳಪತಿ ವಿಜಯ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟನೆ
Bhairathi Ranagal: ಭೈರತಿಗೆ ಸ್ಯಾಂಡಲ್‌ವುಡ್ ಆರತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.