Mangaluru: ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 3 ವರ್ಷ ಜೈಲು
Team Udayavani, Nov 11, 2024, 10:44 PM IST
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್. ಅವರು 3 ವರ್ಷಗಳ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.
ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಸಂಜೀವ ನಾಯ್ಕ (57) ಶಿಕ್ಷೆಗೊಳಗಾದಾತ. ಈತ ಜ. 23ರಂದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ನಿರೀಕ್ಷಕ ರವಿ ಬಿ.ಎಸ್. ತನಿಖೆ ಪೂರ್ಣಗೊಳಿಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶರು ಸಾಕ್ಷ್ಯ, ದಾಖಲೆಗಳು, ಪೂರಕ ಸಾಕ್ಷ್ಯ ಹಾಗೂ ವಾದ ಪ್ರತಿವಾದವನ್ನು ಆಲಿಸಿ ಆರೋಪಿತನ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಭಾರತೀಯ ದಂಡ ಸಂಹಿತೆಯ ಕಲಂ 354(ಎ) ಮತ್ತು ಪೋಕೊÕ ಕಾಯ್ದೆ ಕಲಂ 8ರಂತೆ 3 ವರ್ಷಗಳ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.
ದಂಡದ ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 25,000 ರೂ. ಪರಿಹಾರವನ್ನು ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಈ ಪ್ರಕರಣದಲ್ಲಿ ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ಕೆ. ಬದರಿನಾಥ ನಾಯರಿ ವಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಶಾಲಾ ವಾಹನ ಸುರಕ್ಷತೆ; ಪಾಲಕರಿಗೆ ಚಿಂತೆ
ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ
Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು
Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು
Mangaluru: ಯಾವುದೇ ರಾಜ್ಯಕ್ಕೂ ಕೇಂದ್ರ ಮಲತಾಯಿ ಧೋರಣೆ ಮಾಡಿಲ್ಲ: ನಿರ್ಮಲಾ ಸೀತಾರಾಮನ್
MUST WATCH
ಹೊಸ ಸೇರ್ಪಡೆ
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.